karnataka election 2023 | ಕರಾವಳಿಯಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ ?
ಮಂಗಳೂರು : ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಮಾತ್ರ ಉಳಿದಿದ್ದು, ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕರಾವಳಿ ಭಾಗದಿಂದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 15 ವಿಧಾನಸಭಾ ಕ್ಷೇತ್ರಗಳಿದ್ದು, ಇದರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ.
ಕರಾವಳಿ ಭಾಗ ಬಿಜೆಪಿಯ ಭದ್ರಕೋಟೆಯಾಗಿದ್ದು, ಇಲ್ಲಿಂದ ಮುತಾಲಿಕ್ ಚುನಾವಣಾ ಕಣಕ್ಕೆ ಧುಮುಖಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೇ ಕಾರ್ಕಳದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವಂತೆ ಅಲ್ಲಿನ ಹಿಂದೂಪರ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಕರಾವಳಿ ಜನರ ಇಚ್ಛೆಯಿಂದ ನನಗೆ ಆನಂದವಾಗಿದೆ.
ರಾಜಕೀಯದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಸದ್ಯಕ್ಕೆ ನಾನು ಗೊಂದಲದಲ್ಲಿದ್ದೇನೆ. ಇಲ್ಲಿಯವರೆಗೆ ಚುನಾವಣೆ ಬೇಡ ಬೇಡ ಎನ್ನುತ್ತಿದ್ದೆ.
ಆದ್ರೆ ಇನ್ನೂ ನಾನು ಯಾವುದೇ ನಿರ್ಧಾರ ಮಾಡಿಲ್ಲ. ಜನಸಾಮಾನ್ಯರ ಇಚ್ಛೆ ಮುತಾಲಿಕ್ ಸ್ಪರ್ಧಿಸಲೇಬೇಕು ಅಂತಿದ್ದಾರೆ ಎಂದು ಹೇಳಿದ್ದಾರೆ.