Karnataka Election 2023 : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್….
ಕರ್ನಾಟಕ ವಿಧಾನಸಭಾ ಚುನಾವಣೆಗೆ ನಿಲ್ಲುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಲಾಗಿದೆ. ಆದರೆ ಇನ್ನೂ ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಇಂದು ಯುಗಾದಿ ಹಬ್ಬವಾಗಿರುವುದರಿಂದ ರಜೆಯಿರುವುದರಿಂದ ನಾಳೆ ಪತ್ರಿಕೆಗಳು ಮುದ್ರಣವಾಗದಿರುವುದರಿಂದ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಬ್ಬದ ಪ್ರಯುಕ್ತ ಬೆಂಗಳೂರಿಗೆ ಆಗಮಿಸಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಲಾಗಿದೆ.
ಇನ್ನೂ ಎರಡೂ ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ.
Karnataka Election 2023 : Release of first list of Congress candidates postponed: DK Shivakumar….