Karnataka election 2023 | ‘ಮರ್ ಜಾ ಮೋದಿ’ ಇದು ಅನುಕಂಪ ಗಳಿಸಲು ನಾಟಕ
ಬೆಂಗಳೂರು : ‘ಮರ್ ಜಾ ಮೋದಿ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಲ್ಲದೇ ಇದು ಅನುಕಂಪಗಳಿಸಲು ನಾಟಕ ಮಾಡಿದ್ದಾರೆ ಅಂತಾ ಕುಟುಕಿದ್ದಾರೆ.
ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಾಧನೆಗಳ ಆಧಾರದಲ್ಲಿ ಮತ ಯಾಚಿಸಲಾಗದೆ ಪ್ರಧಾನಿ ನರೇಂದ್ರ ಮೋದಿಯವರು ‘ಮರ್ ಜಾ ಮೋದಿ’ ಎಂದು ಕಾಂಗ್ರೆಸ್ ನವರು ಘೋಷಣೆ ಕೂಗುತ್ತಿದ್ದಾರೆ ಎಂದು ಅನುಕಂಪ ಗಳಿಸಲು ನಾಟಕ ಮಾಡುತ್ತಿರುವುದು ದುರದೃಷ್ಟಕರ
ಮರ್ ಜಾ ಮೋದಿ ಎಂದು ಯಾರು? ಎಲ್ಲಿ? ಕೂಗಿದ್ದರು ಎನ್ನುವುದನ್ನು ನರೇಂದ್ರ ಮೋದಿ ಯವರು ಬಹಿರಂಗ ಪಡಿಸಬೇಕು. ಇಂಟಲಿಜೆನ್ಸ್, ಪೊಲೀಸ್, ತನಿಖಾ ಸಂಸ್ಥೆಗಳು ಎಲ್ಲವೂ ಕೈಯಲ್ಲಿರುವಾಗ ಸಾಯಲು ಹೇಳಿದವರನ್ನು ಎಳೆದು ತಂದು ಜೈಲಿಗೆ ಹಾಕಲು ಏನು ಅಡ್ಡಿ ಇದೆ ಎಂದು ಪ್ರಶ್ನಿಸಿದ್ದಾರೆ.
ಈ ದೇಶದಲ್ಲಿ ಒಬ್ಬ ಪ್ರಧಾನಿಗೆ ರಕ್ಷಣೆ ಇಲ್ಲ ಎಂದಾದರೆ ಇನ್ನು ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ನೀಡುತ್ತಾರೆ? ಇನ್ನು ಯಾಕೆ ಮರ್ ಜಾ ಮೋದಿ ಎಂದು ಕೂಗಿದರವರ ಮೇಲೆ ಕ್ರಮ ತೆಗೆದುಕೊಂಡಿಲ್ಲ? ಇವೆಲ್ಲ ಅನುಕಂಪ ಗಳಿಸಲು ಮಾಡುತ್ತಿರುವ ಗಿಮಿಕ್ ಗಳಷ್ಟೆ. ಜನರು ಮೂರ್ಖರಲ್ಲ, ಅವರಿಗೆ ಈ ನಾಟಕ ಅರ್ಥವಾಗುತ್ತದೆ.
ಟಿಪ್ಪುವಿನಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಹತ್ಯೆಗೆ ಪ್ರಚೋದಿಸಿದ್ದ ಸಚಿವ ಅಶ್ವಥ್ ನಾರಾಯಣ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಯವರು ತಲೆಗೆ ಕುಟ್ಟಿ ಬುದ್ದಿ ಹೇಳಬಹುದು ಎಂದು ಅಂದ್ಕೊಂಡಿದ್ದೆ. ಆದರೆ ಅವರು ತನ್ನನ್ನು ಮರ್ ಜಾ ಎಂದು ಹೇಳುತ್ತಿದ್ದಾರೆ ಎಂದು ಅನುಕಂಪಗಿಟ್ಟಿಸಿಕೊಳ್ಳಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.