ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ಧಾರವಾಡ ಸೇರಿದಂತೆ ಬೆಂಗಳೂರು ನಗರದ 11 ಕ್ಷೇತ್ರಗಳಲ್ಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕೋಟಿ ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ವ್ಯಾಪ್ತಿಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು 15.53 ಕೋಟಿ ರೂ, ನಗದು, 7 ಕೋಟಿ ರೂ. ಮೌಲ್ಯದ 10.14 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಶಾಂತಿನಗರ ವ್ಯಾಪ್ತಿಯಲ್ಲಿ 62.83, ಗಾಂಧಿನಗರ ವ್ಯಾಪ್ತಿಯಲ್ಲಿ 55, ಹೆಬ್ಬಾಳ, ಶಿವಾಜಿನಗರ, ಚಿಕ್ಕಪೇಟೆ, ಜಯನಗರದಲ್ಲಿ 23.50 ಲಕ್ಷ ರೂ. ನಗದು, ಶಿವಾಜಿನಗರ ವ್ಯಾಪ್ತಿಯಲ್ಲಿ 4.77, ಆರ್ಆರ್ ನಗರ ವ್ಯಾಪ್ತಿಯಲ್ಲಿ 3.44, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ 3.35, ಪುಲಿಕೇಶಿನಗರ ವ್ಯಾಪ್ತಿಯಲ್ಲಿ 2.30 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ.
ಧಾರವಾಡ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ ರಾಬರ್ಟ್ ದದ್ದಾಪುರಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ರಾಯಚೂರು ನಗರದ ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ 30 ಲಕ್ಷ ರೂ. ನಗದು, ಐದು ಕೋಟಿ ಮೌಲ್ಯದ ಚಿನ್ನವನ್ನು ಐಟಿ ಇಲಾಖೆ ಜಪ್ತಿ ಮಾಡಿದೆ.








