ಕೋವಿಡ್ ಹೆಚ್ಚಳ ಹಿನ್ನಲೆ – ಅಧಿಕಾರಿಗಳ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ
ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆ ದಿದನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣದಿಂದ ಸರ್ಕಾರಿ ಕಛೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲು ಕೇಂದ್ರ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಕೇಂದ್ರ ಸರ್ಕಾರ ಸಹ ಬಯೋಮೆಟ್ರಿಕ್ ಹಾಜರಾತಿಯ ಬದಲಾಗಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುವಂತೆ ಆದೇಶಿಸಿತ್ತು. ಇದನ್ನ ಆಯಾ ಇಲಾಖೆಯ ನೋಡಲ್ ಅಧಿಕಾರಿಗಳು ಪರಿಶೀಲಿಸುವಂತೆ ಹೇಳಲಾಗಿತ್ತು.
ಕೊರೊನಾ ಮತ್ತು ಒಮಿಕ್ರಾನ್ ಆತಂಕ ಹೆಚ್ಚಳದ ಜೊತೆಗೆ ಸೋಂಕಿತರು ಸಂಖ್ಯೆ ಕೂಡ ಹೆಚ್ಚಾತ್ತಿರುವ ಹಿನ್ನೆಲೆಯಲ್ಲಿ, ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಂಪುಟದ ಹಲವು ಸಚಿವರಿಗೆ ಕರೋನಾ ಸೋಂಕು ಪತ್ತೆಯಾಗಿದೆ. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ನಾಯಕರಿಗೂ ಸೋಂಕು ಪತ್ತೆಯಾಗಿದೆ.