ಶಾಲೆ ತೆರೆಯುವುದಕ್ಕೆ ಸರ್ಕಾರ ಸಿದ್ಧ : ಬಿ.ಸಿ.ನಾಗೇಶ್ school saaksha tv
ಮೈಸೂರು : ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಾಗೇ ಶಾಲೆಗಳನ್ನು ತೆರೆಯಲು ಸರ್ಕಾರ ಸಂಪೂರ್ಣ ಸಿದ್ಧವಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಶಾಲೆಗಳನ್ನು ತೆರೆಯಲು ಸರ್ಕಾರ ಸಿದ್ಧವಿದ್ದು, 18 ವರ್ಷಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆಗಿದೆ.
ತಜ್ಞರ ಸಮಿತಿಯ ವರದಿ ಪಡೆದು ಮುಂದಿನ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ಶಾಲೆಗಳನ್ನು ತೆರೆಯಲು ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ಸಿಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಇದೇ ವೇಳೆ ಖಾಸಗಿ ಶಾಲೆಗಳ ಶುಲ್ಕದ ಗೊಂದಲಗಳ ಬಗ್ಗೆ ಮಾತನಾಡಿ, ಈ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ.
ಕೆಲವರು ಮಾತ್ರ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪೋಷಕರಿಗೆ ಹೊರೆಯಾಗದಂತೆ ಚಿಂತನೆ ನಡೆಸುತ್ತೇವೆ ಎಂದರು.









