Karnataka : ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಸರ್ಕಾರದ ಆದೇಶ – ಏಪ್ರಿಲ್ ನಿಂದ ಜಾರಿ…
ರಾಜ್ಯ ಸರ್ಕಾರಿ ನೌಕರರ ಹೋರಾಟಕ್ಕೆ ಸರ್ಕಾರ ಮಣಿದಿದೆ. ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು 2023 ಏಪ್ರಿಲ್ 1 ರಿಂದ ಆದೇಶ ಜಾರಿ ಬರಲಿದೆ ಎಂದು ಸರಕಾರ ತಿಳಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.
7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್’ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಇದರಿಂದ ಆರೋಗ್ಯ ಇಲಾಖೆ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಲ್ಲಿ ಸರ್ಕಾರಿ ಸೇವೆ ಅಸ್ಥವ್ಯಸ್ಥವಾಗಿತ್ತು.
Karnataka: Govt order to increase salary of government employees by 17% – Effective from April…