ಹಿಜಾಬ್ ವಿವಾದ – ರಾಜ್ಯದ ಹಲವು ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ…
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನಲೆಯಲ್ಲಿ ಇಂದಿನಿಂದ ಒಂದು ವಾರ ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ದೇಶಾದ್ಯಂತ ವಿವಾದ ಎಬ್ಬಿಸಿದ್ದ ಹಿಜಾಬ್ ವಿವಾದ ಅಂತಿಮ ತೀರ್ಪು ಇಂದು ಪ್ರಕಟವಾಗಿದೆ. ಮಹತ್ವದ ತೀರ್ಪು ನೀಡಿದೆ ಹೈಕೋರ್ಟ್ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ನಿಗದಿಪಡಿಸುವುದು ಸೂಕ್ತವಾದ ನಿರ್ಬಂಧನೆ. ಸರ್ಕಾರದ ಆದೇಶ ಕಾನೂನುಬದ್ದವಾಗಿದೆ ಎಂದು ತಿಳಿಸಿದೆ.
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 6 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಕಾರವಾರ: ಇಂದು ಹಿಜಾಬ್ ಪ್ರಕರಣದ ಕುರಿತು ಹೈಕೋರ್ಟ್ ತೀರ್ಪು ಪ್ರಕಟದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರಕನ್ನಡ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ/ಶಿವಮೊಗ್ಗ: ಹೈಕೋರ್ಟ್ನಲ್ಲಿ ಹಿಜಾಬ್ ಕುರಿತು ಮಹತ್ವದ ತೀರ್ಪು ಪ್ರಕಟವಾದ ಹಿನ್ನಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿವೆ. ಉಳಿದಂತೆ ಎಲ್ಲ ಕಡೆ 144 ಸೆಕ್ಷನ್ ಜಾರಿ ಮಾಡಲಾಗಿದೆ