ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

admin by admin
May 22, 2021
in Newsbeat, State, ರಾಜ್ಯ
healh minister dr sudhakar saakshatv
Share on FacebookShare on TwitterShare on WhatsappShare on Telegram

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ರೋಗಿ ಮತ್ತು ವೈದ್ಯರ ಅನುಪಾತ ಇಡೀ ದೇಶದಲ್ಲೇ ಇಲ್ಲ

Related posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

March 28, 2026
SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

March 28, 2026

ಸರ್ಕಾರ ಪೂರೈಸಿರುವ ವೆಂಟಿಲೇಟರ್‌ಗಳ ಬಳಕೆ ಆಗುತ್ತಿಲ್ಲ

ತಜ್ಞರನ್ನು ತಾಲ್ಲೂಕುಗಳಿಗೆ ಪಾಳಿಯಲ್ಲಿ ನಿಯೋಜಿಸಲು ಸೂಚನೆ

healh minister dr sudhakar saakshatvಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ಕೋವಿಡ್‌ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದ ಬಳಿಕ ಸಂಸ್ಥೆಯ ಮುಖ್ಯಸ್ಥರು ಹಾಗೂ ನಾನಾ ವಿಭಾಗಗಳ ಮುಖ್ಯಸ್ಥರನ್ನು ಉದ್ದೇಶಿಸಿ ಶನಿವಾರ ಸಚಿವರು ಮಾತನಾಡಿದರು.

ಸಂಸ್ಥೆಯಲ್ಲಿ ಹೆಚ್ಚು ಕಡಿಮೆ ಒಂದು ಸಾವಿರ ಮಂದಿ ವೈದ್ಯರು ಇದ್ದಾರೆ. ೧೦೩೦ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಮಾಣದಲ್ಲಿ ವೈದ್ಯರು ರೋಗಿಗಳ ಅನುಪಾತ ಯಾವ ದೇಶದಲ್ಲೂ ಇಲ್ಲ. ಎಷ್ಟು ಪರಿಣಾಮಕಾರಿಯಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದೇವೆ ಎಂಬುದನ್ನು ನೀವೆ ಪ್ರಶ್ನೆ ಮಾಡಿಕೊಳ್ಳಬೇಕು, ಇತರೆ ಸಿಬ್ಬಂದಿಯನ್ನು ಲೆಕ್ಕ ಹಾಕಿದರೆ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಮಂದಿ ಇದ್ದೀರಿ. ಆದರೆ ನಿರೀಕ್ಷಿತ ಪ್ರಮಾಣದ ಆರೋಗ್ಯ ಸೇವೆ ಏಕೆ ಲಭ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

healh minister dr sudhakar saakshatvನ್ಯಾಯ ಸಮ್ಮತ ಬಳಕೆ ಆಗಲಿ
ಆಕ್ಸಿಜನ್‌ ಮತ್ತು ಸ್ಟಿರಾಯ್ಡ್‌ನ ನ್ಯಾಯ ಸಮ್ಮತ ಬಳಕೆ ಆಗಬೇಕು. ಅದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು. ಪ್ರತಿದಿನ ಇವುಗಳ ಆಡಿಟ್‌ ಮಾಡಬೇಕು. ಕೋವಿಡ್‌ಯೇತರ ರೋಗಿಗಳಿಗೆ ತುರ್ತು ಇದ್ದಲ್ಲಿ ಮಾತ್ರ ಚಿಕಿತ್ಸೆಗೆ ತೆಗೆದುಕೊಳ್ಳಬೇಕು. ಈ ಭಾಗದಲ್ಲಿ ಕೆಮ್ಸ್‌ ಪ್ರಾದೇಶಿಕ ಆರೋಗ್ಯ ಕೇಂದ್ರ ಆಗಿರುವುದರಿಂದ ಶೇಕಡಾ ೭೫ ರಷ್ಟು ಹಾಸಿಗೆ ಕೋವಿಡ್‌ಗೆ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಹಿರಿಯ ವೈದ್ಯರು, ತಜ್ಞರು, ಬೇರೆ ಬೇರೆ ವಿಭಾಗಗಳ ಮುಖ್ಯಸ್ಥರು ಕೋವಿಡ್‌ ವಾರ್ಡುಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಅದು ನಿಜವೂ ಇದೆ ಎಂದು ತಿಳಿದುಬಂದಿದೆ. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವವರು ಬಂದು ಸಹಿ ಮಾಡಿ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೆಲವರಿಂದ ಇಡೀ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತಿದೆ. ಇಂತವರ ಬಗ್ಗೆ ನಿರ್ದೇಶಕರು ತಕ್ಷಣ ಕ್ರಮ ಕೈಗೊಳ್ಳಬೇಕು. ಇವರಿಂದ ಕೆಲಸ ಮಾಡುವ ಇತರರ ಉತ್ಸಾಹ ಕುಗ್ಗುತ್ತದೆ. ಕೆಸಲ ಕದಿಯುತ್ತಿರುವ ಇಂತಹವರು ಎಷ್ಟೇ ದೊಡ್ಡವರಿದ್ದರೂ ಸರಿಯೇ ಮುಲಾಜಿಲ್ಲದೆ, ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

healh minister dr sudhakar saakshatvವಿಭಾಗ ಮುಖ್ಯಸ್ಥರು ಹೊಣೆ
ಇನ್ನೊಂದು ತಿಂಗಳು ಕಷ್ಟಪಟ್ಟು ಕೆಲಸ ಮಾಡಿ. ಸಾವುಗಳನ್ನು ತಪ್ಪಿಸಿ. ಪ್ರತಿ ಜೀವಕ್ಕೂ ಬೆಲೆಯಿದೆ. ನಾವ್ಯಾರು ಬಲವಂತದಿಂದ ವೈದ್ಯ ವೃತ್ತಿಗೆ ಬಂದಿಲ್ಲ. ಇಷ್ಟಪಟ್ಟು ಬಂದಿರುವಾಗ ಲೋಪಗಳಿಲ್ಲದಂತೆ ಕೆಲಸ ಮಾಡಬೇಕು. ಆತ್ಮ ವಂಚನೆ ಮಾಡಿಕೊಳ್ಳದೆ ಕೆಲಸ ಮಾಡಿ. ಕೆಲವರು ಮಾಡುವ ತಪ್ಪಿಗೆ ಎಲ್ಲರೂ ತಲೆತಗ್ಗಿಸುವಂತೆ ಆಗಬಾರದು ಎಂದು ಕಿವಿಮಾತು ಹೇಳಿದರು.

ವಿಭಾಗಗಳು ಮುಖ್ಯಸ್ಥರು ತಮ್ಮ ತಮ್ಮ ವಿಭಾಗಗಳಲ್ಲಿ ಶಿಸ್ತು ರೂಢಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿ. ಅತ್ಯುತ್ತಮ ಗುಣಮಟ್ಟದ ಉಪಕರಣಗಳನ್ನು ನೀಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಔಷಧಗಳನ್ನು ರವಾನಿಸಲಾಗಿದೆ. ಕೊರತೆ ಇರುವುದನ್ನೂ ಒಂದೆರಡು ದಿನದಲ್ಲಿ ಕೊಡಲಾಗುತ್ತದೆ. ಇವೆಲ್ಲವನ್ನೂ ಪರಿಣಾಮಕಾರಿಯಾಗಿ ಬಳಕೆ ಮಾಡಿ. ಏನೇ ಸಮಸ್ಯೆ ಇದ್ದರೂ ಸ್ಥಳೀಯ ಸಚಿವರು, ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

healh minister dr sudhakar saakshatvಆಕ್ಸಿಜನ್‌ ಆಡಿಟ್‌ ಆಗಬೇಕು
ಪ್ರತಿ ರೋಗಿಗೆ ನೀಡುತ್ತಿರುವ ಆಕ್ಸಿಜನ್‌ ಆಡಿಟ್‌ ಆಗಲೇ ಬೇಕು. ಇಲ್ಲಿ ಅಧಿಕವಾಗಿ ಬಳಕೆ ಆಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ತಜ್ಞ ಸಿಬ್ಬಂದಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ನಿಯೋಜನೆ ಮಾಡಿ ಅಲ್ಲಿನ ಸಿಬ್ಬಂದಿಗೆ ತರಬೇತಿ ಕೊಡಿಸುವ ವ್ಯವಸ್ಥೆ ಆಗಬೇಕು. ಜಿಲ್ಲಾಧಿಕಾರಿ ಅವರು ತಕ್ಷಣ ಈ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಆದೇಶಿಸಿದರು.

ಹಗಲು ರಾತ್ರಿ ಪಾಳಿ ನಿಯೋಜನೆ ಮಾಡಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿ ಅಲ್ಲಿಸ ಸಿಬ್ಬಂದಿ, ಹಾಸಿಗೆಯ ವಿವರಗಳನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು. ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಸಂಸ್ಥೆಗೆ ತಕ್ಷಣವೇ ನೋಡಲ್‌ ಅಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮರಣ ಪ್ರಮಾಣ ಕಡಿಮೆ ಆಗಲೇಬೇಕು. ಪ್ರತಿದಿನ ನಲವತ್ತು ಸಾವುಗಳು ಸಂಭವಿಸುತ್ತಿವೆ. ಅದರೆ ಅವುಗಳಿಗೆ ಬೇರೆ ಬೇರೆ ಕಾರಣಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ದಾಖಲು ಮಾಡಿದ ಎಷ್ಟೇಷ್ಟು ತಾಸುಗಳಲ್ಲಿ ಸಾವು ಸಂಭವಿಸಿವೆ ಎಂಬ ವಿವರ, ಡೆತ್‌ ಆಡಿಟ್‌ ವರದಿಗಳು ಆಯಾ ದಿನವೇ ಸಿದ್ಧಪಡಿಸಿ ಕಳುಹಿಸಿಕೊಡಬೇಕು ಎಂದು ಸಂಸ್ಥೆಯ ನಿರ್ದೇಶಕರಿಗೆ ಸೂಚನೆ ನೀಡಿದರು.

Tags: #cmbsy#karnatakabjp#saakshatvcovid karnatakaCovid19covidinidahubballiMinister Dr sudhakar
ShareTweetSendShare
Join us on:

Related Posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

by Shwetha
March 28, 2026
0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಅಧಿವೇಶನವು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

by Shwetha
March 28, 2026
0

ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಗಳ ಉಚಿತ ಟಿಕೆಟ್ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಶಾಸಕರಿಗೆ ಉಚಿತವಾಗಿ ವಿಐಪಿ ಟಿಕೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram