ರಾಜ್ಯದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳ ಶಾಲಾ ಕಾಲೇಜಿಗಳಿಗ ರಜೆ ಘೋಷಣೆ…
ಭಾರೀ ಮತ್ತು ನಿರಂತರ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಮುಂದಿನ 4 ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದಾದ ಸಾಧ್ಯತ ಇದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ 4 ದಿನಗಳಲ್ಲಿ ರಾಜ್ಯದಲ್ಲಿ ನಿರಂತರ ಮಳೆಯಾಗಲಿದ್ದು, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆ ಕಂಡುಬಂದಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ದೈನಂದಿನ ಜನಜೀವನ ಅಸ್ತವ್ಯಸ್ತವಾಗಿದೆ. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
Karnataka: Heavy rains flood highways, schools and colleges declare holiday; IMD issues warning for next 4 days








