SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ದೇವನೂರು ಮಹದೇವ ಹಾಗೂ ರಾಮಚಂದ್ರ ಗುಹಾ ಅವರು SIR ಅವಧಿ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕಾಲಾವಧಿ ವಿಸ್ತರಿಸುವ ಅಧಿಕಾರ ಚುನಾವಣಾ ಆಯೋಗಕ್ಕೇ ಇದೆ ಎಂದು ಸ್ಪಷ್ಟಪಡಿಸಿದೆ.
ಆಯೋಗದಲ್ಲಿ ಈ ಕಾರ್ಯಕ್ಕಾಗಿ ತಜ್ಞರ ತಂಡ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯೂ ಚುನಾವಣಾ ಆಯೋಗದ್ದೇ ಎಂದು ನ್ಯಾಯಪೀಠ ತಿಳಿಸಿದೆ.
ಅಗತ್ಯವಿದ್ದರೆ SIR ಅವಧಿ ವಿಸ್ತರಣೆ ಸೇರಿದಂತೆ ಸೂಕ್ತ ಕ್ರಮಗಳನ್ನು ಚುನಾವಣಾ ಆಯೋಗವೇ ಕೈಗೊಳ್ಳಲಿದೆ ಎಂದು ಹೈಕೋರ್ಟ್ ತನ್ನ ಅಭಿಪ್ರಾಯದಲ್ಲಿ ಉಲ್ಲೇಖಿಸಿದೆ.








