ಕೊರೋನಾ 2ನೇ ಅಲೆ – 8 ರಾಜ್ಯಗಳ ಪೈಕಿ ಮಹಾರಾಷ್ಟ್ರದ್ದೇ ಸಿಂಹಪಾಲು – ಕರ್ನಾಟಕಕ್ಕೆ 2ನೇ ಸ್ಥಾನ..!
ಕರ್ನಾಟಕ : ದೇಶ ಹಾಗೂ ರಾಜ್ಯದಲ್ಲಿ ಕಳೆದ 5 ತಿಂಗಳಿನಿಂದ ಕೊರೊನಾ ಹಾವಳಿ ಕಡಿಮೆಯಾಗಿತ್ತು. ಆದ್ರೆ ಇದೀಗ ಕೊರೊನಾ 2ನೇ ಅಲೆ ಶುರುವಾಗಿದ್ದು, ಕೊರೊನಾ ರಣಕೇಕೆಗೆ ಜನರು ಆತಂಕ್ಕೆ ಒಳಗಾಗಿದ್ದಾರೆ. ದಿನೇ ದಿನೇ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ರೆ ರಾಜ್ಯದ ಜನರಿಗೆ ಮತ್ತಷ್ಟು ಆತಂಕಕಾರಿ ವಿಚಾರ ಅಂದ್ರೆ ಅದು ಭಾರತದಲ್ಲೇ ಕೊರೊನಾ 2ನೇ ಅಲೆ ಜೋರಾಗಿ ಅಪ್ಪಳಿಸಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.
ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ 8 ರಾಜ್ಯಗಳಲ್ಲಿ ಪ್ರತಿನಿತ್ಯ ಶೇ.84ರಷ್ಟು ಮಂದಿಗೆ ಕೊರೊನಾ ಸೋಂಕು ಹರಡುತ್ತಿದೆ. ಈ 8 ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ 40ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಕರ್ನಾಟಕ 2ನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 3000ಕ್ಕೂ ಹೆಚ್ಚು ಸೋಂಕು ಪ್ರತಿನಿತ್ಯ ಕಾಣಿಸಿಕೊಳ್ಳುತ್ತಿದೆ.
ನಂತರದ ಸ್ಥಾನಗಳಲ್ಲಿ ಪಂಜಾಬ್, ಮಧ್ಯಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಹಾಗೂ ಛತ್ತಿಸ್ಗಢ ಇದೆ.
ನೇಪಾಳಕ್ಕೆ ಭಾರತದ ನೆರವು – 1 ಲಕ್ಷ ಲಸಿಕೆ ಪೂರೈಕೆ..!
ಭಾರತದಲ್ಲಿ 5 ದಿನಗಳಲ್ಲೇ ಕೋಟಿ ಕೋಟಿ ಬಾಚಿದೆ ವಿದೇಶಿ ಸಿನಿಮಾ..! ಆದ್ರೂ ನಿರೀಕ್ಷೆಯ ಹುಸಿಯಾಗಿದೆ…!