Karnataka | ನಾಡಗೀತೆ ಕುರಿತ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ
ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆಗೆ ಕಾಲಮಿತಿಯನ್ನು ನಿಗದಿ ಮಾಡುವ ಮೂಲಕ ನಾಡಗೀತೆ ಕುರಿತ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರಕವಿ ಕುವೆಂಪು ವಿರಚಿತ ನಾಡಿನ ಹೆಮ್ಮೆಯ ನಾಡಗೀತೆ “ಜಯಭಾರತ ಜನನಿಯ ತನುಜಾತೆ”ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ, ಇನ್ನು ಮುಂದೆ ನಾಡಗೀತೆಯನ್ನು 2 ನಿಮಿಷ 30 ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿ, ಕುವೆಂಪು ವಿರಚಿತ ನಾಡಗೀತೆ”ಜಯಭಾರತ ಜನನಿಯ ತನುಜಾತೆ” ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ. ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ನಾಡಗೀತೆಯನ್ನು ಹಾಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.