Karnataka – Maharashtra ಗಡಿ ವಿವಾದ – ಗಡಿ ಚೆಕ್ ಪೋಸ್ಟ್ ನಲ್ಲಿ ಭದ್ರತೆ ಹೆಚ್ಚಳ…
ಕರ್ನಾಟಕ – ಮಹಾರಾಷ್ಟ್ರದ ಗಡಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆಗೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಭದ್ರತೆ ಕುರಿತು ಕಾನೂನು-ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ, ಎಲ್ಲ ರೀತಿಯ ಗಸ್ತು ಹಾಗೂ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗದ ಮೂರು ಕಡೆ ಚೆಕ್ ಪೋಸ್ಟ್ ತೆರೆಯಲಾಗಿದೆ.
ಉಭಯ ರಾಜ್ಯಗಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು. ಇಂದು ಗಡಿ ಭಾಗದಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ ಚಾಲಕ, ನಿರ್ವಾಹಕರಿಗೆ ಪೊಲೀಸ್ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.
Karnataka – Maharashtra border dispute – Security increased at border check post…