ರಾಜ್ಯದ ಕೋವಿಡ್ -19 ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ ಸಚಿವ ಡಾ.ಕೆ. ಸುಧಾಕರ್
ಕೋವಿಡ್ 19 ನಿರ್ವಹಣೆ ಕುರಿತಂತೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ನಡೆಸಿದ್ರು. ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ರು.
ಕೊರೊನಾ ರೋಗಿಯ ಸಂಪರ್ಕಿತ ವ್ಯಕ್ತಿಗಳ ಪತ್ತೆಗೆ ಬೂತ್ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಸ್ವಯಂಸೇವಕರ ತಂಡ ರಚಿಸಲಾಗಿದೆ. ರೋಗಿಯ ಸರಾಸರಿ ಸಂಪರ್ಕ ಪತ್ತೆ ಪ್ರಮಾಣ 3.5 ರಿಂದ (ಜುಲೈನಲ್ಲಿ) 4.5 ಕ್ಕೆ (ಆಗಸ್ಟ್) ಏರಿಕೆಯಾಗಿದೆ ಎಂದು ವಿವರಿಸಿದ್ರು ಸಚಿವ ಡಾ.ಕೆ. ಸುಧಾಕರ್
ದಿನದ ಕೊರೊನಾ ಪರೀಕ್ಷೆ ಸಂಖ್ಯೆಯನ್ನು 20,000 ದಿಂದ 50,000 ಕ್ಕೆ ಏರಿಸಲಾಗಿದೆ. 75,000 ಏರಿಸುವ ಗುರಿ ಇದೆ. ಒಟ್ಟು 100 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ ಎಂದ ಸಚಿವ ಸುಧಾಕರ್ ಅವರು,
ಕಂಟೇನ್ಮೆಂಟ್ ಹಾಗೂ ಬಫರ್ ವಲಯದಲ್ಲಿ ಪರೀಕ್ಷೆಗೆ 1,300 ಮೊಬೈಲ್ ಲ್ಯಾಬ್ ಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದ್ರು.
ಲಕ್ಷಣ ರಹಿತ ಮತ್ತು ಕಡಿಮೆ ಲಕ್ಷಣ ಹೊಂದಿರುವವರಿಗೆ ಸೌಲಭ್ಯವಿದ್ದರ ಮನೆಯಲ್ಲೇ ಆರೈಕೆ ಮಾಡಲಾಗುತ್ತಿದೆ. ಮನೆಗೆ ಭೇಟಿ ಹಾಗೂ ಟೆಲಿ ಮಾನಿಟಿರಿಂಗ್ ಮೂಲಕ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಪ್ರಧಾನಿಗೆ ತಿಳಿಸಿದ್ರು.
43 ಖಾಸಗಿ ಮೆಡಿಕಲ್ ಕಾಲೇಜು, 17 ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಸೇವೆ ಕಲ್ಪಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡಲಾಗಿದೆ. ಕೇಂದ್ರೀಕೃತ ಹಾಸಿಗೆ ನಿರ್ವಹಣೆ ವ್ಯವಸ್ಥೆ ನಿರ್ಮಿಸಿದ್ದು, ಯಾವ ಆಸ್ಪತ್ರೆಯಲ್ಲಿ ಹಾಸಿಗೆ ಖಾಲಿ ಇದೆ ಎಂಬುದರ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ ಎಂದು ವಿವರಣೆ ನೀಡಿದ್ರು
ಶಿಫಾರಸು ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಕೊರೊನಾ ರೋಗಿಗಳ ಶುಲ್ಕವನ್ನು ರಾಜ್ಯ ಸರ್ಕಾರ ಪಾವತಿಸುತ್ತಿದೆ. ಪ್ಲಾಸ್ಮ ಬ್ಯಾಂಕ್ ಆರಂಭಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ 10,100 ಹಾಸಿಗೆ ಸಾಮಥ್ರ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿದೆ. ಬೇರೆ ಕೇಂದ್ರಗಳಲ್ಲಿ 1,04,000 ಹಾಸಿಗೆಗಳಿವೆ. ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ 5,500 ಆಕ್ಸಿಜನ್ ಸಹಿತ ಹಾಸಿಗೆಗಳಿದ್ದು, ಹೆಚ್ಚುವರಿಯಾಗಿ 1,600 ಆಕ್ಸಿಜನ್ ಹಾಸಿಗೆಗಳನ್ನು ನೀಡಲಾಗಿದೆ. ಆಗಸ್ಟ್ ಅಂತ್ಯಕ್ಕೆ ಇನ್ನೂ 5,000 ಆಕ್ಸಿಜನ್ ಹಾಸಿಗೆ ನೀಡಲಾಗುವುದು. ಸೆಪ್ಟೆಂಬರ್ ಅಂತ್ಯಕ್ಕೆ 20,000 ಕ್ಕೂ ಅಧಿಕ ಆಕ್ಸಿಜನ್ ಹಾಸಿಗೆಗಳು ಲಭ್ಯವಿರಲಿದೆ. ಪ್ರಮುಖ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ರು.
ಕೋವಿಡ್ ರೋಗಿಗಳನ್ನು ಕರೆದೊಯ್ಯಲು ಆಂಬ್ಯುಲೆನ್ಸ್ ಸಂಖ್ಯೆಯನ್ನು 800 ರಿಂದ 2,000 ಕ್ಕೆ ಹೆಚ್ಚಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಆಂಬ್ಯುಲೆನ್ಸ್ ಕೊರತೆ ಇಲ್ಲ ಎಂದ್ರು.