ಅರಣ್ಯ ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕೀಯ ನಾಯಕರು ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿಯವರು ಸಹ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
.ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಶ್ರೀ ಉಮೇಶ್ ಕತ್ತಿ ಜಿ ಅವರು ಕರ್ನಾಟಕದ ಅಭಿವೃದ್ಧಿಗೆ ಸಮೃದ್ಧ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುಃಖಕರ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ.
— Narendra Modi (@narendramodi) September 7, 2022
ಇನ್ನೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.