ಭದ್ರಾ ಮೇಲ್ದಂಡೆ ಯೋಜನೆಗೆ ಪಿಐಬಿಯಲ್ಲಿ ಅನುಮೋದನೆ – ಸಿ ಎಂ ಬೊಮ್ಮಾಯಿ…
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಮುಖ ಯೋಜನೆಯಾಗಿ ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ – ಪಿಐಬಿಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ಜಿಲ್ಲೆ ಹೊಸ ದುರ್ಗದಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಕುರಿತು ತಾವು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಕೇಂದ್ರದಿಂದ ಯೋಜನೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆಯಾದ ತುಮಕೂರು- ಚಿತ್ರದುರ್ಗ- ದಾವಣಗೆರೆ ನಡುವಣ ನೇರ ರೈಲು ಮಾರ್ಗ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.
Karnataka: PIB approves Bhadra Upper Embankment Project – CM Bommai…








