ಸಿದ್ದರಾಮಯ್ಯ ಆಡಳಿತದಲ್ಲಿ ರಾಜ್ಯ ವಿಜಯನಗರ ಸಾಮ್ರಾಜ್ಯವಾಗಿತ್ತಾ..?
ಶಿವಮೊಗ್ಗ : ವಿಜಯನಗರ ಸಾಮ್ರಾಜ್ಯವಾಗಿತ್ತಾ? ಈಗ ಮಾತ್ರ ಸಾಲ ಮಾಡಲಾಗುತ್ತಿದೆಯಾ? ತಾನೂ ಮುಖ್ಯಮಂತ್ರಿ ಆಗಿದ್ದಾಗ ಒಂದು ರೂಪಾಯಿನೂ ಸಾಲಮಾಡಿಲ್ಲವೆಂದು ಹೇಳಲಿ ನೋಡೋಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. Karnataka politics | ex chief minister siddaramaiah minister eshwarappa saaksha tv
ಸರ್ಕಾರದಲ್ಲಿ ಬೊಕ್ಕಸದಲ್ಲಿ ಹಣವಿಲ್ಲ. ಸಾಲದಲ್ಲಿಯೇ ಮುಳುಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ. ಇದಕ್ಕೆ ಶಿವಮೊಗ್ಗದಲ್ಲಿ ತಿರುಗೇಟು ನೀಡಿರುವ ಈಶ್ವರಪ್ಪ, ಅವರ ಕಾಲದಲ್ಲಿ ಕರ್ನಾಟದಲ್ಲಿ ವಜ್ರ ವೈಡೂರ್ಯಗಳನ್ನು ರಸ್ತೆಯ ಮೇಲೆ ಮಾರಾಟ ಮಾಡಲಾಗುತ್ತಿತ್ತಾ? ಯಾರೂ ಮನೆಗೆ ಬೀಗ ಹಾಕಲಾಗುತ್ತಿರಲಿಲ್ವಾ. ವಿಜಯನಗರ ಸಾಮ್ರಾಜ್ಯವಾಗಿತ್ತಾ? ಅವರು ಮುಖ್ಯಮಂತ್ರಿ ಆಗಿದ್ದಾಗ ಒಂದು ರೂಪಾಯಿನೂ ಸಾಲಮಾಡಿಲ್ಲವೆಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.
ಇದೇ ವೇಳೆ ಕಾಂಗ್ರೆಸ್ ಮಹದಾಯಿ ಹೋರಾಟದ ಬಗ್ಗೆ ಟೀಕೆ ಮಾಡಿದ ಕೆ.ಎಸ್.ಈಶ್ವರಪ್ಪ, ಮಹದಾಯಿ ಹೋರಾಟವನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಮ್ಮ ಹೋರಾಟ ನಮ್ಮದು ಎಂದು ಎದೆ ಮುಟ್ಟಿಕೊಂಡು ಹೇಳಲಿ. ಈ ಹಿಂದೆ ಸೋನಿಯಾಗಾಂಧಿ ಅವರು ಗೋವಾ ಚುನಾವಣೆ ಸಂದರ್ಭದಲ್ಲಿ ಮಹದಾಯಿಯ ಒಂದು ಹನಿಯನ್ನು ಕರ್ನಾಟಕಕ್ಕೆ ನೀಡಲ್ಲ ಅಂದಿದ್ದರು. ಇದನ್ನು ಸಿದ್ದರಾಮಯ್ಯ ಮತ್ತು ಡಿಕೆಶಿ ಇಲ್ಲವೆಂದು ಹೇಳಲಿ ನೋಡೋಣ ಎಂದು ಗುಡುಗಿದರು.