‘ಕೈ’ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪಾಟೀಲ್ ನೇಮಕ : ಬಿಜೆಪಿ ವ್ಯಂಗ್ಯ
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಒಂದು ವರ್ಷ ಮಾತ್ರ ಬಾಕಿ ಇದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಚುನಾವಣಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿಯೇ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿಯನ್ನು ನೀಡಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರನ್ನು ಎಐಸಿಸಿ ನೇಮಕ ಮಾಡಿದೆ. ಈ ಆದೇಶ ತಕ್ಷಣವೇ ಜಾರಿಗೆ ಬರಲಿದೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಂ.ಬಿ.ಪಾಟೀಲರಿಗೆ ಅಭಿನಂದನೆಗಳು. ನಿಮ್ಮ ಹೊಸ ಜವಾಬ್ದಾರಿ ಧರ್ಮ ವಿಭಜನೆಗೆ ಪ್ರೇರಣೆ ನೀಡದಿರಲಿ ಎಂದು ನಾವು ಆಶಿಸುತ್ತೇವೆ. ಎಂ.ಬಿ.ಪಾಟೀಲ್ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ವೀರಶೈವ – ಲಿಂಗಾಯಿತ ಧರ್ಮ ವಿಭಜನೆಗೆ ಕಾರಣೀಕರ್ತರಾಗಿದ್ದರು. ಆಗ ಎಂ.ಬಿ.ಪಾಟೀಲ್ ಅವರು ಸಿದ್ದರಾಮಯ್ಯನವರ ಕೈಗೊಂಬೆಯಾಗಿದ್ದರು, ಈಗ ಸಮಯದ ಗೊಂಬೆಯಾಗದಿರಿ ಎಂದು ಕುಟುಕಿದೆ.