ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್)
ಸ್ಥಳ : ಕರ್ನಾಟಕ
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 21413 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 1135 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ವಯೋಮಾನ : ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆ ವೇತನ
ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 12,000 – 29,380
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ಡಾಕ್ ಸೇವಕ ರೂ. 10,000 – 24,470
ಆಯ್ಕೆ ವಿಧಾನ : 10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 03, 2025
Website: https://indiapostgdsonline.cept.gov.in/HomePageS/D11.aspx








