Karnataka | ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮೊಟಕು
ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮಪಂಚಾಯಿತಿ ಅಧ್ಯಕ್ಷರನ್ನು ಹೊರಗಿಡಲು ನಿರ್ಧರಿಸಿದೆ.
ಅದರಂತೆ ವ್ಯವಹಾರದ ಎಲ್ಲಾ ಚೆಕ್ ಗಳಿಗೆ ಸಹಿ ಮಾಡುವ ಅಧಿಕಾರವನ್ನು ಪಿಡಿಓ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ನೀಡಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಸಭೆ ನಡೆಸಿದ್ದು, ಸಭೆಯಲ್ಲಿ ನಡಾವಳಿಗಳನ್ನು ರೂಪಿಸಲಾಗಿದೆ. ಈ ನಡಾವಳಿಗಳನ್ನು ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಬಿಲ್ ಪಾವತಿ ಮಾಡಲು ಗ್ರಾಮ ಪಂಚಾಯಿಗಳ ಅಧ್ಯಕ್ಷರು ಲಂಚ ಪಡೆಯುತ್ತಿರುವ ಆರೋಪಗಳು ಹೆಚ್ಚಾಗುತ್ತಿವೆ.

ಜೊತೆಗೆ ಹಲವು ಪ್ರಕರಣಗಳಲ್ಲಿ ವಿಳಂಬವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಹೀಗಾಗಿ ವ್ಯವಹಾರದ ಎಲ್ಲಾ ಚೆಕ್ ಗಳಿಗೆ ಸಹಿ ಮಾಡುವ ಅಧಿಕಾರವನ್ನು ಪಿಡಿಓ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ನೀಡಲಾಗಿದೆ.
ಮುಖ್ಯವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದ್ದು, ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಾಗಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಾದ ಪಿಡಿಒ, ಎಸ್ ಡಿಎಎ ನಿರ್ವಹಿಸಬೇಕು.
ಒಂದು ವೇಳೆ ಪಂಚಾಯಿತಿಗಳಲ್ಲಿ ಎಸ್ ಡಿಎಎ ಸ್ಥಾನ ಖಾಲಿ ಇದ್ದರೆ ಪಿಡಿಓ ಜೊತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡವಬೇಕು ಎಂದು ಸೂಚಿಸಲಾಗಿದೆ.
ಇದು ಮಾತ್ರವಲ್ಲದೇ ಗೃಹ, ವಾಣಿಜ್ಯ, ಕಟ್ಟಡ ಕಾಮಗಾರಿಗಳು, ಕೈಗಾರಿಕೆ.ಗಣಿಕಾರಿಗೆ, ಅಂಗಡಿ, ಹೋಟೆಲ್ ಮತ್ತಿತರ ವಾಣಿಜ್ಯ ವಹಿವಾಟುಗಳ ಆರಂಭಕ್ಕೆ ಪರವಾನಗಿ, ಇ ಸ್ವತ್ತು ನೀಡುವ ಅಧಿಕಾರಿವನ್ನು ಪಿಡಿಓಗಳಿಗೆ ನೀಡಲಾಗಿದೆ.
ಈ ಹಿಂದೆ ಈ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪರವಾನಗಿ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು.
ಇದೀಗ ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70 ರವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಪರವಾನಿಗಿ ನೀಡುವ ಅಧಿಕಾರವನ್ನು ಪಿಡಿಓಗಳಿಗೆ ನೀಡಲಾಗಿದೆ.