ಬೆಂಗಳೂರು : 2019-20ನೇ SSLC ಪರೀಕ್ಷೆ ಫಲಿತಾಂಶ ಇತ್ತೀಚೆಗಷ್ಟೇ ಪ್ರಕಟಗೊಂಡಿತ್ತು. ನಂತರ ಪಾಸ್, ಫೇಲ್, ವಿದ್ಯಾರ್ಥಿಗಳು ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ ಆಗಸ್ಟ್ 08ಕ್ಕೆ ದಿನಾಂಕವನ್ನು ಸಹ ನಿಗದಿ ಮಾಡಲಾಗಿತ್ತು. ಆದರೆ ಇದೀಗ ಈ ದಿನಾಂಕವನ್ನೂ ಇದೇ ತಿಂಗಳ 27ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಆದೇಶ ಹೊರಬಿದ್ದಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪರೀಕ್ಷೆಗಳ ನಿರ್ದೇಶಕರಾದಂತ ವಿ ಸುಮಂಗಲ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸುವಂತೆ ಕೆಲವು ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಮಂಡಳಿಗೆ ದೂರವಾಣಿಯ ಮುಖಾಂತರ ಸಂಪರ್ಕಿಸಿ ಮನವಿ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.