ಕನ್ನಡ ಬಾವುಟದ ನಿರ್ಮಾತೃ ಯಾರು ಗೊತ್ತಾ ?
ನವೆಂಬರ್ ಒಂದರಂದು, ಕರ್ನಾಟಕ ರಾಜೋತ್ಸವವದ ಸಂದರ್ಭದಲ್ಲಿ ಕರ್ನಾಟಕದ ಪ್ರತಿ ಸಾರ್ವಜನಿಕ ಸಂಸ್ಥೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ,ಧ್ವಜ ಪೋಸ್ಟ್ಗಳು ಮತ್ತು ವಾಹನಗಳು ಹಾರಿಸುವ ಕನ್ನಡ ಬಾವುಟ ವನ್ನು ರಚಿಸಿದವರು ಯಾರು ಗೊತ್ತಾ ? ಅವರೇ ನಮ್ಮ ಮ. ರಾಮಮೂರ್ತಿಯವರು.
ಕನ್ನಡ ಚಳವಳಿಗಳ ಹರಿಕಾರರು ಎಂದೆ ಪ್ರಸಿದ್ಧರಾಗಿರುವ ಕೊಣಂದೂರು ಲಿಂಗಪ್ಪ, ಅ.ನ.ಕೃ. ಮೈ.ಸು.ನಟರಾಜ್, ಮೈ.ಸು. ಶೇಷಗಿರಿರಾವ್, ನಾಡಿಗೇರ ಕೃಷ್ಣರಾವ್, ಕರ್ಲಮಂಗಲಂ ಶ್ರೀಕಂಠಯ್ಯ ಮೊದಲಾದವರುಗಳ ಜೊತೆಗೆ ಗುರುತಿಸಿಕೊಂಡವರು ಮ.ರಾಮಮೂರ್ತಿ.
ಬಾವುಟದ ಮೇಲಿನ ಭಾಗವು ಹಳದಿ ಮತ್ತು ಕೆಳಗಿನ ಭಾಗವು ಕೆಂಪು ಬಣ್ಣದ್ದಾಗಿದೆ,ಧ್ವಜದ ಹಳದಿ ಬಣ್ಣವು ಅರಿಶಿಣ ಮತ್ತು ಕೆಂಪು ಬಣ್ಣವು ಕುಂಕುಮದ ಸಂಕೇತವಾಗಿದೆ. ಇವೆರಡು ವಸ್ತುಗಳು ಭಾರತದ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ವಿವಿಧ ಕಾರಣಗಳಿಗೆ ಬಳಸುತ್ತಾರೆ. ಕೆಂಪು ಬಣ್ಣ ಅಭಿವೃದ್ಧಿಯ ಸಂಕೇತ, ಅರಿಸಿಣ ಬಣ್ಣ ಆರೋಗ್ಯಕರ ಸಮಾಜದ ಸಂಕೇತವಾಗಿದೆ.ಇವೆರಡು ಮಂಗಳವನ್ನು ಮತ್ತು ಯೋಗಕ್ಷೇಮವನ್ನು ಸೂಚಿಸುತ್ತದೆ.
ದೇಶಕ್ಕೆ ಸ್ವಾತಂತ್ರ್ಯ ಬಂದ ಹೊಸತರಲ್ಲಿ ಬೆಂಗಳೂರಿನ ಸುತ್ತಮುತ್ತ ಕನ್ನಡೇತರರ ಹಾವಳಿ ಜಾಸ್ತಿಯಾದಾಗ, ಜನ ಸಾಮಾನ್ಯರಲ್ಲಿ ಕನ್ನಡದ ಅರಿವು ಮೂಡಿಸಲು ಇರುವ ಏಕೈಕ ಮಾರ್ಗವೆಂದರೆ ಕನ್ನಡವನ್ನು ಎಲ್ಲರೂ ಓದುವಂತಾಗಲು ಕುತೂಹಲ ಭರಿತ ಕಾದಂಬರಿಗಳ ಕ್ಷೇತ್ರವೂ ಒಂದು ಎಂದು ಬಗೆದು ಪತ್ತೇದಾರಿ ಕಾದಂಬರಿಗಳ ರಚನೆಗೆ ಮುಂದಾದರು. ೧೯೫೦-೬೦ರ ದಶಕದಲ್ಲಿ ಹಲವಾರು ಪತ್ತೆದಾರಿ ಕಾದಂಬರಿಗಳನ್ನು ರಚಿಸಿದರು. ಇವರು ಬರೆದ ಪತ್ತೇದಾರಿ ಕಾದಂಬರಿಗಳಲ್ಲಿ ವಿಪ್ಲವ ಇಬ್ಬರು ರಾಣಿಯರು ಚಿತ್ರಲೇಖ ರಾಜದಂಡ ವಿಷಕನ್ಯೆ ಮರೆಯಾಗಿದ್ದ ವಜ್ರಗಳು ಮುಂತಾದ ೧೫೦ ಕ್ಕೂ ಹೆಚ್ಚು ಪತ್ತೇದಾರಿ ಕಾದಂಬರಿಗಳನ್ನು ರಚಿಸಿದರು.
karnataka rajyotsava: do you know who made Kannada flag?