ನಟ ಪುನೀತ್ ರಾಜ್ ಕುಮಾರ್ ಗೆ “ ಕರ್ನಾಟಕ ರತ್ನ” – ಸಕಲ ಸಿದ್ಧತೆ…
ಇಂದು ನಾಡಿನಾದ್ಯಂತ 67ನೇ ಕರ್ನಾಟಕ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯೋತ್ಸವದ ಪ್ರಯುಕ್ತ ಇಂದು ಕರ್ನಾಟಕದ ಅತ್ಯೂನ್ನತ ನಾಗರೀಕ ಪ್ರಶಸ್ತಿಯಾದ “ಕರ್ನಾಟಕ ರತ್ನ” ಪ್ರಶಸ್ತಿಯನ್ನ ಮರಣೋತ್ತರವಾಗಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.
ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭಕ್ಕೆ ತಮಿಳಿನ ನಟ ರಜನಿಕಾಂತ್ ಮತ್ತು ತೆಲುಗಿನ ಜ್ಯೂನಿಯ್ ಎನ್’ಟಿಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಲಿದ್ದಾರೆ.
ಇನ್ಫೋಸಿಸ್ ಫೌಂಡೇಷನ್’ನ ಮುಖ್ಯಸ್ಥರಾದ ಸುಧಾಮೂರ್ತಿಯವರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೆ, ನಟ ಡಾ.ರಾಜ್ ಕುಮಾರ್ ಅವರ ಕುಟುಂಬದ 50 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
karnataka rajyotsava: “Karnataka Ratna” for actor Puneeth Rajkumar