ನಾಡದ್ರೋಹಿಗಳನ್ನ ಗಡಿಪಾರು ಮಾಡಿ : ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಸೇನೆ ಪ್ರತಿಭಟನೆ mandya saaksha tv
ಮಂಡ್ಯ : ಬೆಳಗಾವಿಯಲ್ಲಿ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಕನ್ನಡ ಧ್ವಜವನ್ನು ಸುಟ್ಟಿರುವ ಎಂಇ.ಎಸ್ ಪುಂಡರ ವಿರುದ್ಧ ನಿರ್ಧಾಕ್ಷಣ್ಯ ಕ್ರಮಕೈಗೊಳ್ಳಬೇಕು ಹಾಗೂ ನಾಡದ್ರೋಹಿಗಳನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಸೇನೆ ಪ್ರತಿಭಟನೆ ನಡೆಸಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಿಂದ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದವರೆಗೆ ಕರ್ನಾಟಕ ರಕ್ಷಣಾ ಸೇನೆಯ ಪದಾಧಿಕಾರಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಎ.ಸಿ.ಕಾಂತರಾಜು, ಜಿಲ್ಲಾ ಗೌರವಾಧ್ಯಕ್ಷ ಎಸ್.ವಿ.ವಿನಯ್, ಜಿಲ್ಲಾ ಉಪಾಧ್ಯಕ್ಷ ಸಮೀರ್ ಮತ್ತು ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಎಂಇಎಸ್ ಪುಂಡರನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿದರು. ಜೊತೆಗೆ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ಕೊಡಿಸಿ ಮರಾಠಿಗರ ಪುಂಡಾಟವನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದರು.