ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ R. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ರೈತರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೇರಿದೆ ಎಂದು ದುಃಖ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಅಶೋಕ್, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನವೇ ಈಗ ‘ಕಾಟಾಚಾರ ಅಧಿವೇಶನ’ ಆಗಿದೆ ಎಂದು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಸರ್ಕಾರಕ್ಕೆ ರೈತರ ಪರ ಮಾತನಾಡಲು ಯೋಗ್ಯತೆ ಇಲ್ಲ ಎಂದು ತೀವ್ರ ಟೀಕೆ ಮಾಡಿದರು.
ಬಸವರಾಜ ಬೊಮ್ಮಾಯಿ ಸರ್ಕಾರ ವಿದ್ಯಾನಿಧಿ ಯೋಜನೆ ಜಾರಿ ಮಾಡಿತ್ತು. ಆದರೆ ಪ್ರಸ್ತುತ ಸರ್ಕಾರ ಅದಕ್ಕೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಪ್ರವಾಹ ಅಥವಾ ಬರಗಾಲ ಬಂದಾಗ, ತಮ್ಮ ಸರ್ಕಾರ ಒಂದೇ ತಿಂಗಳೊಳಗೆ ಪರಿಹಾರ ನೀಡುತ್ತಿತ್ತು, ಆದರೆ ಈ ಸರ್ಕಾರ 6 ತಿಂಗಳಾದರೂ ಪರಿಹಾರ ನೀಡದೇ ರೈತರ ಕಷ್ಟವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕೃಷಿ ಸಂಕಷ್ಟ ಗಂಭೀರವಾಗುತ್ತಿರುವಾಗ, ರೈತರಿಗೆ ತಕ್ಷಣದ ಪರಿಹಾರ ಮತ್ತು ಯೋಜನೆಗಳ ಸರಿಯಾದ ಜಾರಿಗೆ ಒತ್ತಾಯಿಸಿದರು.








