Karnataka : ವಿದ್ಯುತ್ ಶಾಕ್‌ಗೆ ಗುರಿಯಾಗಿದ್ದ ಆನೆಯ ರಕ್ಷಣೆ : ಪ್ರಧಾನಿ ಮೋದಿ ಮೆಚ್ಚುಗೆ…
ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿದ್ದ ಆನೆಗೆ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯ ಸಮಯೋಚಿತವಾಗಿ ಆಗಮಿಸಿ ಚಿಕಿತ್ಸೆ ನೀಡಿದ್ದರಿಂದ ಜೀವನ್ಮರಣ ಸ್ಥಿತಿಯಲ್ಲಿದ್ದ ಆನೆ ಮರಳಿ ಬದುಕಿ ಬಂದಿದೆ. ಇದೀಗ ಈ ಕಾರ್ಯ ಇಂಟರ್ ನೆಟ್ ನಲ್ಲಿ ಗಮನ ಸೆಳೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಂದಲೂ ಪ್ರಶಂಸೆಗೆ ಪಾತ್ರವಾಗಿದೆ.
ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ “ ಇದನ್ನ ನೋಡಲು ಸಂತೋಷವಾಗುತ್ತದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯವಾಗಿದೆ. ಎಂದು ಮರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಭೂಪೇಂದರ್ ಯಾದವ್ ಪ್ರಕಾರ, ಆನೆಯನ್ನು ನಂತರ ಮೀಸಲು ಪ್ರದೇಶಕ್ಕೆ ಬಿಡಲಾಗಿದೆ. ಸಿಬ್ಬಂದಿಯಿಂದ ನಿಗಾ ಇರಿಸಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್ ತಂತಿ ಬೇಲಿಯನ್ನು ಸ್ಪರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು.
Karnataka : Rescue of an elephant that was electrocuted: PM Modi appreciates…








