44 ಮಂದಿ ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಕಂದಾಯ ಇಲಾಖೆ…
ಮುಂಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಆಯೋಗದ ಸೂಚನೆಯನ್ನು ಆಧರಿಸಿ ಒಟ್ಟು 44 ಮಂದಿ ತಹಶಿಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಬೆಳಗಾವಿಯ ಬೈಲಹೊಂಗಲ ತಾಲೂಕು ಕಚೇರಿಗೆ ಗ್ರೇಡ್-1 ತಹಸೀಲ್ದಾರ್ ಆಗಿ ಸಂಗಮನಾಥ ಮೆಳ್ಳಿಗೇರಿ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿಗೆ ಗ್ರೇಡ್-1 ತಹಸೀಲ್ದಾರ್ ಆಗಿ ಎಸ್.ಮಂದಲಮನಿ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿಗೆ ಗ್ರೇಡ್-1 ತಹಸೀಲ್ದಾರ್ ಆಗಿ ಟಿ.ಜಿ.ಸುರೇಶಾಚಾರ್, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿಗೆ ಗ್ರೇಡ್-1 ತಹಸೀಲ್ದಾರ್ ಆಗಿ ಚಂದ್ರಶೇಖರ್ ಶಂಬಣ್ಣ ಗಾಳಿ, ತುಮಕೂರು ಜಿಲ್ಲೆಯ ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾಗಿ ಅನಿತಾ ಲಕ್ಷ್ಮೀ ಎಸ್., ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿಗೆ ಗ್ರೇಡ್-1 ತಹಶಿಲ್ದಾರ್ ಎಸ್.ಬಿ.ಕೂಡಲಗಿ ಸೇರಿದಂತೆ ಒಟ್ಟು 44 ಮಂದಿ ತಹಶಿಲ್ದಾರ್ ಗಳನ್ನು ವಿವಿಧ ಸ್ಥಳಗಳನ್ನು ನಿಗದಿಗೊಳಿಸಿ ವರ್ಗಾವಣೆ ಮಾಡಲಾಗಿದೆ.
ಕಂದಾಯ ಇಲಾಖೆ ಆಯೋಗದ ಮಾರ್ಗಸೂಚಿಯಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆಗೆ ಆದೇಶಿಸಿದ್ದು, ಮುಂದಿನ ಆದೇಶದ ವರೆಗೆ ನಿಗದಿಸಿರುವ ಸ್ಥಳಗಳಲ್ಲಿ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿಟಿಸಿ ಪ್ರತಿಯನ್ನು ಇಲಾಖೆಗೆ ಇ-ಮೇಲ್ ಮೂಲಕ ಕಳುಹಿಸುವಂತೆ ತಿಳಿಸಿದೆ,ನೇಮಕ ಮಾಡಲಾದ ಹುದ್ದೆಗಳ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.
Karnataka: Revenue Department has issued an order to transfer 44 Tehsildars…