ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪ್ರಾರಂಭ
ಬೆಂಗಳೂರು : ಇಂದಿನಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಇಂದು ಮತ್ತು ನಾಳೆ ವಿಶೇಷ ಚರ್ಚೆ ನಡೆಯಲಿದೆ.
ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ವಿಧಾನ ಮಂಡಲ ಅಧಿವೇಶ ಸುಮಾರು ಸುಮಾರು 19 ದಿನಗಳ ಕಾಲ ನಡೆಯಲಿದೆ.
ಕಲಾಪ ಪ್ರಾರಂಭವಾಗುತ್ತಿದ್ದಂತೆ ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ಚರ್ಚೆಗೆ ಅವಕಾಶ ಕೊಡಲಾಗುವುದು ಎಂದು ಸ್ಪೀಕರ್ ಕಾಗೇರಿ ಸ್ಪಷ್ಟಪಡಿಸಿದ್ದಾರೆ.
ಈ ಚರ್ಚೆಯೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಬಗ್ಗೆ ಮಾತ್ರ ಇರಲಿದೆ. ರಾಜ್ಯ ಚುನಾವಣೆ ಆಯೋಗ ನಡೆಸುವ ಚುನಾವಣೆ ಬಗ್ಗೆ ಚರ್ಚೆ ಆಗೋದಿಲ್ಲ ಅಂತ ಸ್ಪೀಕರ್ ಕಾಗೇರಿ ಸ್ಪಷ್ಟಪಡಿಸಿದ್ದಾರೆ.+
ಸದನದಲ್ಲಿ ಸ್ಫೋಟಿಸಲಿದೆ ಸಾಹುಕಾರ್ ರಾಸಲೀಲೆ ಪ್ರಕರಣ
ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದು ಕಲಾಪದಲ್ಲೂ ಪ್ರಸ್ತಾಪವಾಗುವುದರಿಂದ ಸಂಶಯವಿಲ್ಲ.
ರಮೇಶ್ ಜಾರಕಿಹೊಳಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರೂ ವಿಪಕ್ಷಗಳು ಇದನ್ನ ಅಸ್ತ್ರವಾಗಿ ಉಪಯೋಗಿಸುವ ಸಾಧ್ಯತೆ.
ಈ ಮೂಲಕ ಸರ್ಕಾರವನ್ನ ಇಕ್ಕಟಿಗೆ ಸಿಲುಕಿಸುವ ಪ್ರಯತ್ನವನ್ನ ವಿಪಕ್ಷಗಳು ಮಾಡಲಿವೆ.