ಕರ್ನಾಟಕ – ಎಸ್ಎಸ್ಎಲ್ಸಿ, ಪಿಯು ಪರೀಕ್ಷೆ ರದ್ದತಿಗೆ ಒಲವು ತೋರದ ವಿದ್ಯಾರ್ಥಿಗಳು !
12 ನೇ ತರಗತಿ ಸಿಬಿಎಸ್ಇ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬೆನ್ನಲ್ಲೇ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಗೊಂದಲ ಉಂಟಾಗಿದೆ. ಆದರೆ ಪರೀಕ್ಷೆ ರದ್ದತಿಗೆ ಹೆಚ್ಚಿನ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿರುವುದು ಹಲವು ಸಮೀಕ್ಷೆಗಳಿಂದ ತಿಳಿದುಬಂದಿದೆ.
ಈ ನಡುವೆ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಎಂಬ ಪಿಟಿಷನ್ ಫೈಲ್ ಕೂಡ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೋರ್ಡ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸುವ ಈ ಅರ್ಜಿಗೆ 24 ಗಂಟೆಗಳಿಗೂ ಹೆಚ್ಚಿನ ಅವಧಿಯಲ್ಲಿ ಕೇವಲ 280 ಮಂದಿ ವಿದ್ಯಾರ್ಥಿಗಳು ಮಾತ್ರ ಸಹಿ ಹಾಕಿದ್ದು ಈ ಮೂಲಕ ರಾಜ್ಯದ ವಿದ್ಯಾರ್ಥಿಗಳು ನಾವು ಪರೀಕ್ಷೆ ಬರೆಯಲು ಸನ್ನದ್ಧರಾಗಿದ್ದೇವೆ ಎಂಬ ಸೂಚನೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ಕಡಿಮೆಯಾದ ಮೇಲೆ ಪರೀಕ್ಷೆ ನಡೆಯಲಿ, ಆದರೆ ಪರೀಕ್ಷೆ ರದ್ದು ಮಾಡುವುದು ಬೇಡ ಎಂಬ ಅಭಿಪ್ರಾಯ ವಿದ್ಯಾರ್ಥಿಗಳಿಂದ ವ್ಯಕ್ತವಾಗಿದೆ.
ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ. ಕೊರೋನಾ ಸಂಕಷ್ಟದ ನಡುವೆಯೂ ನಾವು ಪರೀಕ್ಷೆಗೆ ತಯಾರಿ ನಡೆಸಿದ್ದೇವೆ. ಪರೀಕ್ಷೆ ರದ್ದು ಮಾಡಲು ನಮ್ಮ ಸಹಮತ ಇಲ್ಲ ಎಂದು ಹೆಚ್ಚಿನ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಲವು ಸಮೀಕ್ಷೆಗಳಲ್ಲಿ ಕೂಡ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು, ಹೆತ್ತವರು ಮತ್ತು ಶಿಕ್ಷಕರು ಪರೀಕ್ಷೆ ಬೇಕು ಎಂದು ಆಗ್ರಹಿಸಿದ್ದಾರೆ.
ನಾವು ಉತ್ತರಿಸಲು ಸನ್ನದ್ಧರಾಗಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದರೆ, ಹೆತ್ತವರು ಮಕ್ಕಳನ್ನು ಪರೀಕ್ಷೆ ಬರೆಯಲು ಕಳುಹಿಸಲು ಸಿದ್ಧರಾಗಿರುವುದಾಗಿ ಮತ್ತು ಶಿಕ್ಷಕರು ಪರೀಕ್ಷೆ ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿರುವುದು ಸಮೀಕ್ಷೆಗಳಿಂದ ಬಹಿರಂಗವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರಂತರ ಸಭೆ ನಡೆಸಿದ್ದು, ಪರೀಕ್ಷೆಯ ರದ್ದತಿ ಅಥವಾ ನಡೆಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದೆ.
ಪರೀಕ್ಷೆಯ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಹೆತ್ತವರ ಜತೆ ಸಮಾಲೋಚನೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಬ್ಬಿನ ರಸದ ಇನ್ನಷ್ಟು ಆರೋಗ್ಯ ಪ್ರಯೋಜನಗಳು#Saakshatv #healthtips #sugarcane https://t.co/2XjBuk8raQ
— Saaksha TV (@SaakshaTv) June 1, 2021
ಎಸ್‌ಬಿಐ ನಿಂದ 5 ಲಕ್ಷ ರೂಪಾಯಿಗಳ ಕೋವಿಡ್ ಪರ್ಸನಲ್ ಲೋನ್! ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?#SBI #coronatreatment https://t.co/kxXOOAG3vK
— Saaksha TV (@SaakshaTv) June 2, 2021
ರುಚಿಯಾದ ಕ್ಯಾಪ್ಸಿಕಂ ಬಾತ್#saakshatv #cooking #recipe https://t.co/MhP2wa419O
— Saaksha TV (@SaakshaTv) June 2, 2021
ನಿಮಗೆ ದಿನವಿಡೀ ಆಲಸ್ಯ , ದಣಿವು ಕಾಣಿಸಿಕೊಳ್ಳುತ್ತಿದೆಯೇ? ಹಾಗಿದ್ದರೆ ವಿಟಮಿನ್ ಡಿ ಕೊರತೆ ಕಾರಣವಾಗಿರಬಹುದು#Saakshatv #healthtips #vitaminD https://t.co/GlsUpQobAH
— Saaksha TV (@SaakshaTv) June 2, 2021
ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು ನೀಡಲಿದೆ 5 ಲಕ್ಷ ರೂಗಳವರೆಗೆ ಸಾಲ !#Banks #loans #covidtreatment https://t.co/tJYFqSyYYO
— Saaksha TV (@SaakshaTv) June 1, 2021
#Karnataka #sslcStudents #examcancellation #nimmasuresh








