Karnataka state boarder issue: ಗಡಿ ವಿವಾದ ಪ್ರಕರಣ ಎದುರಿಸಲು ಕರ್ನಾಟಕದ ಸಕಲ ಸಿದ್ಧತೆ
ಬೆಳಗಾವಿ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾಗಿದ್ದು, ಪ್ರಕರಣ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾವು ಸರ್ವಪಕ್ಷಗಳ ಸಭೆ ಮತ್ತು ಗಡಿ ಪ್ರಾಧಿಕಾರದಲ್ಲಿ ಕೈಗೊಂಡ ನಿರ್ಣಯಗಳಿಗೆ ಬದ್ಧರಾಗಿರುವುದಾಗಿ ಹೇಳಿದ ಸಿಎಂ ಬೊಮ್ಮಾಯಿ ಗಡಿ ವಿವಾದ ಕುರಿತಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲು ಬಲಿಷ್ಠ ಕಾನೂನು ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಸುಪ್ರೀಂನಲ್ಲಿ ಪ್ರಬಲ ವಾದ ಮಂಡನೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದ್ದು, 1956ರ ರಾಜ್ಯ ಪುನರ್ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯು ಸತತ 18 ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಬೆಳಗಾವಿ, ಬೀದರ್, ಬಾಲ್ಕಿ ಸೇರಿದಂತೆ ಕರ್ನಾಟಕದ ಗಡಿಯಲ್ಲಿರುವ 865 ಹಳ್ಳಿಗಳು ತಮಗೆ ಸೇರಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.
ಈ ನಡುವೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧವೆಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿರುವುದಾಗಿ ವರದಿಯಾಗಿದೆ.