Karnataka budget | ರಾಜ್ಯ ಬಜೆಟ್ ನ ಹೊಸ ಘೋಷಣೆಗಳು!
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 2,65,720 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ತಮ್ಮ ಚೊಚ್ಚಲ ಬಜೆಟ್ ನಲ್ಲಿಯೇ ಬೊಮ್ಮಾಯಿ ಅವರು ಕೆಲ ಹೊಸ ಘೋಷಣೆಗಳನ್ನು ಮಾಡಿದ್ದಾರೆ.
ಅವು ಹೀಗಿವೆ..
*ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನ.
*ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನ ಹಾಗೂ 600 ಕೋಟಿ ರೂ. ಅನುದಾನ.
*ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.
*33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ.
*ಪರಿಸ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ.
*57 ತಾಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ.
*ಹಗರಿ ಹಾಗೂ ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.
*ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ.
*ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ.
*ಕೆ.ಆರ್ ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪನೆ.
*ರಾಜ್ಯದಲ್ಲಿ ನೂತನ 100 ಪಶು ಚಿಕಿತ್ಸಾಲಯಗಳ ಪ್ರಾರಂಭ.
*ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ.
*ರಾಜ್ಯದಲ್ಲಿ ಗೋಶಾಲೆಗಳ ಸಂಖ್ಯೆ 100 ಕ್ಕೆ ಹೆಚ್ಚಳ, 50 ಕೋಟಿ ರೂ. ಅನುದಾನ.
*ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ ಜಾರಿ.
ಇವಿಷ್ಟು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಹೊಸ ಘೋಷಣೆಗಳಾಗಿವೆ.