ಮೈಸೂರು : ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ನಗರದ ಪ್ರದೇಶಿಕ ಕಚೇರಿ ಬಳಿ ಪ್ರತಿಭಟಿಸುತ್ತಿದ್ದು, ಕೂಡಲೇ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಇನ್ನು ಪ್ರತಿಭಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿದ್ದು, ರೈತರ ಸಮಸ್ಯೆಗಳನ್ನು ಆಲಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು, ಕಾಯ್ದೆ ತಿದ್ದುಪಡಿಯಿಂದಾಗುವ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು. ಅಲ್ಲದೆ ಕಾಯ್ದೆಯಿಂದಾಗುವ ತೊಂದರೆಗಳನ್ನ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕಾಯ್ದೆಯನ್ನ ಕೈಬಿಡುವಂತ ಸಚಿವರಿಗೆ ಒತ್ತಾಯ ಪತ್ರ ನೀಡಿದರು.
ಈ ವೇಳೆ ಮಾತನಾಡಿದ ಸೋಮಶೇಖರ್, ರೈತರ ಮನವಿಯನ್ನ ಸಿಎಂ ಬಿ.ಎಸ್ ಯಡಿಯೂರಪ್ಪ ಗಮನಕ್ಕೆ ತರಲಾಗುವುದು ಎಂದು ರೈತರಿಗೆ ಭರವಸೆ ನೀಡಿದರು.








