ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್..! ಆದ್ರೆ..
ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ಮಾಡಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ರೆ ವೀಕೆಂಡ್ ಕರ್ಫ್ಯೂಗೆ ಆಡಳಿತ ಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿತ್ತು.
ಅಲ್ಲದೇ ಹೋಟೆಲ್ ಮಾಲೀಕರು, ಬೀದಿ ವ್ಯಾಪಾರಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಜ್ಞರ ಸಭೆ ನಡೆಸಿದ್ದು, ವೀಕೆಂಡ್ ಕರ್ಫ್ಯೂ ರದ್ದು ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿದ್ದು, ಜನವರಿ 31ರವರೆಗೆ ನೈಟ್ ಕರ್ಫ್ಯೂ ಮುಂದುವರೆಯಬೇಕು. ಜೊತೆಗೆ ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಸಲಹೆ ನೀಡಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ ಮುಂದುವರೆಸುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ ಜಾರಿಗೊಳಿಸಬಹುದು.
ಇನ್ನುಳಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳೇ ಪರಿಸ್ಥಿತಿ ನೀಡಿ ಕಠಿಣ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅವಕಾಶ ನೀಡಲಾಗುವುದು.









