ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

admin by admin
September 18, 2026
in Newsbeat, Sports, ಕ್ರೀಡೆ
karnataka-throwball-teams-win-three-gold-medals-at-7th-national-tournament-guntur-2026

karnataka-throwball-teams-win-three-gold-medals-at-7th-national-tournament-guntur-2026

Share on FacebookShare on TwitterShare on WhatsappShare on Telegram

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ 2026–27ನೇ ಸಾಲಿನ 7ನೇ ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವು ಮೂರು ವಿಭಾಗಗಳಲ್ಲಿ ಭಾಗವಹಿಸಿ, ಮೂರು ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದೆ.

Related posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026
ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

September 18, 2026

14, 17 ಹಾಗೂ 19ರ ವಯೋಮಿತಿ ವಿಭಾಗಗಳಲ್ಲಿ ಕರ್ನಾಟಕದ ಆಟಗಾರ್ತಿಯರು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮೆರೆದಿದ್ದಾರೆ. 14ರ ವಯೋಮಿತಿ ವಿಭಾಗದಲ್ಲಿ ಕರ್ನಾಟಕ ತಂಡವು ಮಹಾರಾಷ್ಟ್ರ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಅದೇ ರೀತಿ 17ರ ವಯೋಮಿತಿ ವಿಭಾಗದಲ್ಲಿ ಆತಿಥೇಯ ಆಂಧ್ರಪ್ರದೇಶ ತಂಡದ ವಿರುದ್ಧ ಗೆಲುವು ಸಾಧಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.

ಇನ್ನು 19ರ ವಯೋಮಿತಿ ವಿಭಾಗದಲ್ಲಿ ಕರ್ನಾಟಕ ತಂಡವು ತಮಿಳುನಾಡು ತಂಡವನ್ನು ಎದುರಿಸಿ ಜಯ ಸಾಧಿಸುವ ಮೂಲಕ ಚಿನ್ನದ ಪದಕ ಪಡೆದುಕೊಂಡಿದೆ. ಈ ಮೂಲಕ ಮೂರು ವಯೋಮಿತಿ ವಿಭಾಗಗಳಲ್ಲೂ ಕರ್ನಾಟಕದ ತಂಡಗಳು ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರಾಬಲ್ಯವನ್ನು ಪ್ರದರ್ಶಿಸಿವೆ.

ತಂಡದ ಯಶಸ್ಸಿನ ಹಿಂದೆ ತರಬೇತುದಾರರಾದ ಮುನಿರಾಜ್, ಸಂತೋಷ್, ಮುನಿಕೃಷ್ಣ ಮತ್ತು ಮಂಜುನಾಥ್ ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ನಜ್ಮಾ ಹಾಗೂ ಶೃತಿ ತಂಡದೊಂದಿಗೆ ಮ್ಯಾನೇಜರ್‌ಗಳಾಗಿ ಕಾರ್ಯನಿರ್ವಹಿಸಿ ಕ್ರೀಡಾಪಟುಗಳಿಗೆ ಅಗತ್ಯ ಸಹಕಾರ ನೀಡಿದ್ದಾರೆ.

ಅದೇ ರೀತಿ ಮೂರು ವಿಭಾಗಗಳ ತಂಡಗಳಿಗೆ 14ರ ವಯೋಮಿತಿಯಲ್ಲಿ ಕುಷಿ ಗೌಡ, 17ರ ವಯೋಮಿತಿಯಲ್ಲಿ ಸೈದಾ ಜಾರ ಅಹಮದ್ ಹಾಗೂ 19ರ ವಯೋಮಿತಿಯಲ್ಲಿ ಪರ್ಲ್ ಅಂಡ್ರೀಯ ನಾಯಕಿಯರಾಗಿ ತಂಡವನ್ನು ಮುನ್ನಡೆಸಿದ್ದಾರೆ.

ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಕರ್ನಾಟಕದ ಮೂರು ತಂಡಗಳೂ ಚಿನ್ನದ ಪದಕ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವುದು ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಯುವ ಕ್ರೀಡಾಪಟುಗಳ ಈ ಸಾಧನೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಭೆಗಳು ಕ್ರೀಡಾ ಕ್ಷೇತ್ರದತ್ತ ಬರಲು ಪ್ರೇರಣೆಯಾಗಲಿದೆ

Tags: #KarnatakaThrowball #NationalThrowballChampionship #GoldMedal #GunturSports #KarnatakaSports #ThrowballWinners #Throwball2026 #KannadaNews #SaakshaTV #SportsKarnataka #saakshatv
ShareTweetSendShare
Join us on:

Related Posts

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

ನಾನೀಗ ಮುಖ್ಯಮಂತ್ರಿಯಲ್ಲ ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೇ ಗೊತ್ತು: ಸಿದ್ದರಾಮಯ್ಯ ಅವರ ಅಂತರಾಳದ ಮಾತುಗಳ ಹಿಂದಿರುವ ಮರ್ಮವೇನು?

by Shwetha
September 18, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಖಡಕ್ ಮಾತುಗಳಿಗೆ ಹೆಸರಾದ ಸಿದ್ದರಾಮಯ್ಯನವರು ಇಂದು ಅತ್ಯಂತ ಭಾವುಕವಾಗಿ ಮತ್ತು ಮಾರ್ಮಿಕವಾಗಿ ಮಾತನಾಡಿದ್ದಾರೆ. ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಈಗ ಎಷ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram