ಆ.23 ರಿಂದ ಶಾಲೆಗಳು ಓಪನ್ : ಆತಂಕಬೇಡ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು : ಕೊರೊನಾ ಮೂರನೇ ಅಲೆಯ ಭೀತಿಯ ನಡುವೆ ಇದೇ ಆಗಸ್ಟ್ 23 ರಿಂದ ಅಂದ್ರೆ ಮುಂದಿನ ಸೋಮವಾರದಿಂದ ರಾಜ್ಯದಾದ್ಯಂತ ಶಾಲೆಗಳು ಓಪನ್ ಆಗಲಿವೆ.
ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದೆ.
ಈ ಮಧ್ಯೆ ಸೋಮವಾರದಿಂದ ಶಾಲೆಗಳು ಓಪನ್ ಮಾಡುವುದರ ಬಗ್ಗೆ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೊಮ್ಮಾಯಿ, ಪೋಷಕರು ಆತಂಕಪಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ಕೂಡ ಆತಂಕಕ್ಕೆ ಒಳಗಾಗಲದೇ ಶಾಲೆಗೆ ಬನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಶಾಲೆ ಆರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಕೋವಿಡ್ ವಿಚಾರಕ್ಕೆ ಸಂಬಂಧಿಸಿ ಸೂಕ್ತ ನಿರ್ದೇಶನ ಗಳನ್ನು ಕೊಟ್ಟಿದ್ದೇವೆ ಎಂದ ಬೊಮ್ಮಾಯಿ ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ಗಮನ ಇಡುತ್ತೆ, ಜೊತೆಗೆ ಪೋಷಕರು ಕೂಡ ಜಾಗೃತರಾಗಿರಬೇಕು ಎಂದು ಮನವಿಕೊಂಡಿದ್ದಾರೆ.









