ಕರ್ನಾಟಕದ ಕರಕುಶಲ ವೈಭವ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ Saaksha Tv
ನವದೆಹಲಿ: 73ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರದರ್ಶನಗೊಂಡ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಸಿಕ್ಕಿದೆ ಎಂದು ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಹೇಳಿದೆ.
ಈ ಸಲದ ಗಣರಾಜ್ಯೋತ್ಸವದ ಪರೇಡ್ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಸ್ತಬ್ಧಚಿತ್ರ ಸೇರಿದಂತೆ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಸ್ತಬ್ಧಚಿತ್ರ ಭಾಗಿಯಾಗಿದ್ದವು. ಇವುಗಳ ಪೈಕಿ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತು ನಿರ್ಮಾಣಗೊಂಡಿದ್ದ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ ಸಿಕ್ಕಿದೆ.
ಹಾಗೇ ಕರ್ನಾಟಕದ ಕರಕುಶಲ ಕೆಲಯ ವೈಭವ ಸಾರುವ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ ಸಿಕ್ಕಿದೆ. ಹಾಗೇ ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರಕ್ಕೆ ಮೂರನೇ ಸ್ಥಾನ ಸಿಕ್ಕಿದೆ.
ಅಲ್ಲದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಂದೇ ಭಾರತಮ್ ನೃತ್ಯ ತಂಡಕ್ಕೆ ಬಹುಮಾನ ನೀಡಲಾಗಿದೆ. ಇದರಲ್ಲಿ ಕರ್ನಾಟಕದ ಕೆಲ ನೃತ್ಯಗಾರರು ಭಾಗಿಯಾಗಿದ್ದರು.
ಈ ಕುರಿತು ಟ್ವೀಟ್ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಗಣರಾಜ್ಯೋತ್ಸವ ಪರೇಡ್ 2022ರಲ್ಲಿ ‘ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ಕರ್ನಾಟಕದ ಟ್ಯಾಬ್ಲೋ 2ನೇ ಸ್ಥಾನವನ್ನು ಗೆದ್ದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.