ಸಹಾಯಕ ಪ್ರಾಧ್ಯಾಪಕರ ಹುದ್ದೆ | ಅರ್ಜಿ ಸಲ್ಲಿಸುವ ನಿಯಮಗಳಲ್ಲಿ ಸಡಿಲಿಕೆ
ಬೆಂಗಳೂರು:1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ್ದ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದೆ.
ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸುತ್ತೋಲೆಯನ್ನು ಹೊರಡಿಸಿದೆ.
ಈ ಹಿಂದೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೆಟ್, ಸ್ಲೆಟ್ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ನಿಯಮಗಳಲ್ಲಿ ಸಡಿಲಿಕೆ ಮಾಡಿದೆ.
ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೊಲೆಯಲ್ಲಿ 2021 ರ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಅಭ್ಯರ್ಥಿಗಳು ನೆಟ್, ಕೆ-ಸೆಟ್ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಸರ್ಕಾರಿ ಹುದ್ದೆಯಲ್ಲಿದ್ದು, ಅರ್ಜಿ ಸಲ್ಲಿಸಲು ನಿರಾಪೇಕ್ಷಣಾ ಪತ್ರ ಪಡೆಯದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ.