ಎಲೆಕ್ಟ್ರಿಕ್ ವಾಹನಗಳ ನೋಂದಣಿ : 3ನೇ ಸ್ಥಾನದಲ್ಲಿ ಕರ್ನಾಟಕ..!
ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ನೋಂದಣಿ ವಿಚಾರದಲ್ಲಿ ಭಾರತದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ.. ಹೌದು ಕೇಂದ್ರ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಭಾರತದಲ್ಲಿ ಒಟ್ಟು 8,70,141 ಎಲೆಕ್ಟ್ರಿಕ್ ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ 255,700 ವಾಹನಗಳು ನೊಂದಾವಣೆಗೊಂಡಿದ್ದು ಅತಿ ಹೆಚ್ಚು ನೋಂದಾಯಿತ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಅಗ್ರ ಸ್ಥಾನದಲ್ಲಿದೆ.. ನಂತರದ ಸ್ಥಾನದಲ್ಲಿದೆ ರಾಷ್ಟ್ರ ರಾಜಧಾನಿ ದೆಹಲಿ. ದೆಹಲಿಯಲ್ಲಿ 125,347 ವಾಹನಗಳ ನೊಂದಾವಣಿಯಾಗಿದೆ.. 3ನೇ ಸ್ಥಾನದಲ್ಲಿ ನಮ್ಮ ಕರ್ನಾಟಕ ಇದೆ.. ರಾಜ್ಯದಲ್ಲಿ 72,544 ವಾಹನಗಳ ನೊಂದಣಿಯಾಗಿದೆ. 4ನೇ ಸ್ಥಾನದಲ್ಲಿ ಬಿಹಾರ (58,014) ಮತ್ತು 5ನೇ ಸ್ಥಾನದಲ್ಲಿ ಮಹಾರಾಷ್ಟ್ರ(52,506)ವಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿಯನ್ನು ಶೇ.12 ರಿಂದ ಶೇ.5ಕ್ಕೆ ಇಳಿಸಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಚಾರ್ಜರ್‌ಗಳು ಹಾಗೂ ಚಾರ್ಜಿಂಗ್ ಸ್ಟೇಷನ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇ.18 ರಿಂದ ಶೇ 5ಕ್ಕೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ಉತ್ತೇಜಿಸಲು ಕೈಗಾರಿಕೆಗಳ ಸಚಿವಾಲಯವು 2015ರಲ್ಲಿ ಫಾಸ್ಟರ್ ಅಡಾಪ್ಶನ್ ಮತ್ತು ಮ್ಯಾನುಫ್ಯಾಕ್ಚರಿಂಗ್, ಎಲೆಕ್ಟ್ರಿಕ್ ವೆಹಿಕಲ್ಸ್ ಇನ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.








