ಅಭಿರಾಮಚಂದ್ರ ಟೀಸರ್ ನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದು, ಈ ಕುರಿತು ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ.
ಅಭಿರಾಮಚಂದ್ರ ಟೀಸರ್ ರಿಲೀಸ್ ಮಾಡಿದ್ದು ತುಂಬಾ ಖುಷಿಯಾಯಿತು. ಈ ಚಿತ್ರವನ್ನು ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ತುಂಬಾ ಬ್ಯೂಟಿಫುಲ್ ವಿಷ್ಯೂವಲ್ಸ್ ಇವೆ. ಬರೀ ಮಕ್ಕಳ ಕಥೆ ಇದಾಗಿದೆ. ಸ್ಟೋರಿಯಲ್ಲಿ ಬೇರೆ ಬೇರೆ ತಿರುವು ಕಾಣುತ್ತಿದೆ. ಅದನ್ನು ನಾವು ಹೇಳೋದಿಕ್ಕಿಂತ ಡೈರೆಕ್ಟರ್ ಹೇಳಿದರೆ ಒಳ್ಳೆಯದು. ಟೀಸರ್ ನೋಡುತ್ತಿದ್ದರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಗುತ್ತಿದೆ. ಆ ಸಿನಿಮಾ ತರ ಹಿಟ್ ಆಗಲಿ ಎಂದು ಹಾರೈಸಿದ್ದಾರೆ.
ಈ ಸಿನಿಮಾ ಮೇ ನಲ್ಲಿ ರಿಲೀಸ್ ಆಗುತ್ತಿದೆ. ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ದ ಸ್ನೇಹ ಸುಂದರ ನೋಟ ಅಭಿರಾಮಚಂದ್ರ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. ರಥ ಕಿರಣ, ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ಅಭಿನಯಿಸಿದ್ದಾರೆ.
ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದ್ದು, ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.








