Karwar | ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು
ಕಾರವಾರ : ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಅಪಘಾತಕ್ಕೀಡಾಗಿದ್ದು, ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಮತ್ತು ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ಮಂದಿಗೆ ಗಂಭೀರವಾದ ಗಾಯಗಳಾಗಿದ್ದು, ಏಳು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ದುರಂತದಲ್ಲಿ ಸಾವನ್ನಪ್ಪಿದವರನ್ನು 60 ವರ್ಷದ ಕಸ್ತೂರಮ್ಮ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡವರಿಗೆ ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಇನ್ನು ಈ ಘಟನೆ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.