ಕಟೀಲ್ ಆಡಿಯೋ ವಿಚಾರ : ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು..?
ಬೆಂಗಳೂರು : ಈಗ ಆಡಿಯೋಗಳೇ ಹೆಚ್ಚು ಸೌಂಡ್ ಮಾಡುತ್ತಿವೆ. ಈಗಿನ ವ್ಯವಸ್ಥೆಯಲ್ಲಿ ಏನೇ ಮಾತನಾಡಿದರೂ ರೆಕಾರ್ಡ್ ಆಗುತ್ತದೆ. ನಾವು ಏನು ಮಾತನಾಡಿದ್ರೂ ಎಚ್ಚರಿಕೆಯಿಂದ ಇರಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಬದಲಾವಣೆ ವಿಚಾರವಾಗಿ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗ ಆಡಿಯೋಗಳೇ ಹೆಚ್ಚು ಸೌಂಡ್ ಮಾಡುತ್ತಿವೆ. ಈಗಿನ ವ್ಯವಸ್ಥೆಯಲ್ಲಿ ಏನೇ ಮಾತನಾಡಿದರೂ ರೆಕಾರ್ಡ್ ಆಗುತ್ತದೆ. ನಾವು ಏನು ಮಾತನಾಡಿದ್ರೂ ಎಚ್ಚರಿಕೆಯಿಂದ ಇರಬೇಕು.
ಆಡಿಯೋಗಳು ಇತ್ತೀಚಿಗೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಏನೇ ಮಾತನಾಡಿದ್ರು ರೆಕಾರ್ಡ್ ಆಗುತ್ತದೆ. ಅಕ್ಕ-ಪಕ್ಕ ಇರುವ ಯುವಕರು ರೆಕಾರ್ಡ್ ಮಾಡುತ್ತಿರುವುದು ಸಾಮಾನ್ಯವಾಗಿದೆ. ನಾವು ಮಾತನಾಡಬೇಕಾದರೆ ಎಚ್ಚರಿಕೆಯಿಂದ ಇರಬೇಕು. ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೋ, ಇಲ್ಲವೋ ಎಂಬುದು ತನಿಖೆ ಆಗಬೇಕು ಎಂದು ಹೇಳಿದರು.
ಇದೇ ವೇಳೆ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಕಳೆದ ಎರಡು ವರ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅವರೇ ಹೇಳುತ್ತಿದ್ದಾರೆ. ಈ ಸಮಸ್ಯೆಗಳನ್ನು ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳೋದು ಒಳ್ಳೆಯದು. ಇದು ಬಗೆಹರಿಯದಿದ್ದರೆ ರಾಜ್ಯದ ಸಮಸ್ಯೆಗಳ ಬಗ್ಗೆ ಹಾಗೂ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ಆಗುವುದಿಲ್ಲ ಎಂದರು.