kateel
ಈಗಲೂ , ಮುಂದೆಯೂ ಗೆಲುವು ಬಿಜೆಪಿಯದ್ದೇ ಎಂದ ನಳಿನ್ ಕಟೀಲ್..!
ರಾಯಚೂರು: ಬಸಕಲ್ಯಾಣ, ಮಸ್ಕಿ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸುವುದು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಸಿಂಧನೂರು ಸೇರಿದಂತೆ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದೇ ಗಗೆಲ್ಲುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಯಚೂರಿನಲ್ಲಿ ಈ ಸಂಬಂಧ ಮಾತನಾಡಿರುವ ಅವರು, ಭೂತಕಾಲದ ಬಗ್ಗೆ ನಾವು ಯೋಚಿಸುವುದಿಲ್ಲ. ಭವಿಷದ್ಯದಲ್ಲೂ ಬಿಜೆಪಿಯೇ ಜಯಭೇರಿ ಬಾರಿಸುವಂತೆ ನೋಡಿಕೊಳ್ಳುತ್ತೇವೆ. ವಿಜಯೇಂದ್ರ ಅವರು ನಮ್ಮ ಪಕ್ಷದಲ್ಲಿ ಪ್ರಮುಖರು. ಯಡಿಯೂರಪ್ಪ ಅವರು ನಮ್ಮ ನಾಯಕರು. ಆಯಾ ಪ್ರದೇಶಗಳಲ್ಲಿ ಪ್ರಾಬಲ್ಯ ಆಧರಿಸಿ ವಿಜಯೇಂದ್ರ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಅವರಿಗೆ ಬಸವ ಕಲ್ಯಾಣ ಉಸ್ತುವಾರಿ ಕೊಟ್ಟರೆ, ರವಿಕುಮಾರ್ ಹಾಗೂ ಸಚಿವ ವಿ.ಸೋಮಣ್ಣ ಅವರಿಗೆ ಮಸ್ಕಿ ಚುನಾವಣೆಯ ಉಸ್ತುವಾರಿ ನೀಡಲಾಗಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಗೆಲುವಿಗಾಗಿ ಪಕ್ಷ ಎಲ್ಲರನ್ನೂ ಬಳಸಿಕೊಳ್ಳುತ್ತದೆ ಎಂದು ಹೇಳಿದ್ರು.
ಮುಂದುವರೆದು ಮಾತನಾಡಿದ ಕಟೀಲ್ ಅವರು, ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಬಿಜೆಪಿಯೊಳಗೆ ಕಾಲಿಟ್ಟಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅದು ನನಗೆ ಗೊತ್ತಿಲ್ಲ. ಯಾರೇ ಬಂದರೂ ನಮ್ಮ ಪಕ್ಷದೊಳಕ್ಕೆ ಎಳೆದುಕೊಳ್ಳುತ್ತೇವೆ ಎಂದಿದ್ದಾರೆ. ಇದೇ ವೇಳೆ ವಿಜಯನಗರ ರಚನೆ ಕುರಿತಾದ ಸಮಸ್ಯೆ ಬಗ್ಗೆ ಮಾತನಾಡಿರುವ ಕಟೀಲ್ ಅವರು ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಅವರ ಹೇಳಿಕೆಯನ್ನು ಗಮನಿಸಿದ್ದೇವೆ. ಎಲ್ಲರನ್ನೂ ಕರೆದು ಮಾತನಾಡಿ ಸಮಸ್ಯೆ ಸರಿಪಡಿಸುತ್ತೇವೆ ಎಂದು ತಿಳಿಸಿದರು.
ವಿದ್ಯಾಗಮ ಸತ್ತಿಲ್ಲ, ಕೆಲವರು ಸಾಯಿಸುವ ಪ್ರಯತ್ನ ಮಾಡಿದ್ರು: ಸುರೇಶ್ ಕುಮಾರ್ ಸಿಟ್ಟು ಯಾರ ಮೇಲೆ..?
ಮುಂದುವರೆದು ಮಾತನಾಡಿದ ಕಟೀಲ್ ಅವರು, ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಅವರು ಬಿಜೆಪಿಯೊಳಗೆ ಕಾಲಿಟ್ಟಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅದು ನನಗೆ ಗೊತ್ತಿಲ್ಲ. ಯಾರೇ ಬಂದರೂ ನಮ್ಮ ಪಕ್ಷದೊಳಕ್ಕೆ ಎಳೆದುಕೊಳ್ಳುತ್ತೇವೆ ಎಂದಿದ್ದಾರೆ. ಇದೇ ವೇಳೆ ವಿಜಯನಗರ ರಚನೆ ಕುರಿತಾದ ಸಮಸ್ಯೆ ಬಗ್ಗೆ ಮಾತನಾಡಿರುವ ಕಟೀಲ್ ಅವರು ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಅವರ ಹೇಳಿಕೆಯನ್ನು ಗಮನಿಸಿದ್ದೇವೆ. ಎಲ್ಲರನ್ನೂ ಕರೆದು ಮಾತನಾಡಿ ಸಮಸ್ಯೆ ಸರಿಪಡಿಸುತ್ತೇವೆ ಎಂದು ತಿಳಿಸಿದರು.
kateel
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel