ಕೇಂದ್ರದ ಅಣತಿಯಂತೆ ನಾವು ಕೆಲಸ ಮಾಡುತ್ತೇವೆ : ಕಟೀಲ್
ದಾವಣಗೆರೆ : ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ರಾಜ್ಯ ಬಿಜೆಪಿ ಸಾರಥಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಬಿಜೆಪಿಯಲ್ಲಿ ಬಾಂಬೆ ಟೀಂ, ಹಳೆ ಟೀಂ, ಹೊಸ ಟೀಂ ಇಲ್ಲ ; ಸೋಮಶೇಖರ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ.
ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಶೀಘ್ರದಲ್ಲೇ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿ ನೀಡಿದ್ದು, ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರ್ತಾರೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮಗಳ ನಿಶ್ಚಿತಾರ್ಥ ದಿನವೇ ನೋಟಿಸ್ ಕೊಟ್ಟಿದ್ದಾರೆ.. ತಕ್ಕ ಉತ್ತರ ಕೊಡ್ತೇನೆ : ಡಿಕೆಶಿ
ಬಿ.ಎಸ್. ಯಡಿಯೂರಪ್ಪ ಎರಡೂವರೆ ವರ್ಷ ಸಿಎಂ ಆಗಿರ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ.
ಸಹಜವಾಗಿಯೇ ಸಿಎಂ ಅವರನ್ನು ಭೇಟಿ ಮಾಡುತ್ತಿರುತ್ತೇವೆ. ಇದಕ್ಕೆ ಅಪಾರ್ಥ ಕಲ್ಪಿಸುವುದು ಬೇಡ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇನ್ನು ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ, ನಾವು ಒಟ್ಟಾಗಿದ್ದೇವೆ.
ಕೇಂದ್ರದ ಅಣತಿಯಂತೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿ, ಸದ್ಯದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ.
ಯಡಿಯೂರಪ್ಪ, ಹೈಕಮಾಂಡ್ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಪ್ರಾಧಿಕಾರ ರಚನೆ ವಿಚಾರ ಮಾತನಾಡಿ, ಬೇಡಿಕೆ ಬಂದ ಕಾರಣ ಲಿಂಗಾಯುತ ಪ್ರಾಧಿಕಾರ ರಚನೆಯಾಗಿದೆ. ಇದರಲ್ಲಿ ವಿರೋಧ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









