ಕಾಟೇರ ಚಿತ್ರ ಭರ್ಜರಿ ಯಶಸ್ಸು ಸಾಧಿಸಿದ ನಂತರ ಈಗ ದರ್ಶನ್ ಮತ್ತು ಟೀಂ ಟೆಂಪಲ್ ರನ್ ನಡೆಸಿದೆ.
ಈಗ ದರ್ಶನ್ ಮತ್ತು ತಂಡ ಮತ್ತೊಂದು ಸಿನಿಮಾದ ಕುರಿತು ಅಪ್ಡೇಟ್ ನೀಡಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ ಮಿಲನಾ ಪ್ರಕಾಶ್ ಅವರ ಹೊಸ ಸಿನಿಮಾದಲ್ಲಿ ದರ್ಶನ್ ನಟಿಸಲಿದ್ದು, ಕೆಲವೇ ದಿನಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಇದಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನವನ್ನು ದರ್ಶನ್ ಮಾಡಿದ್ದಾರೆ. ದರ್ಶನ್ ಕೆಲವು ಆಪ್ತರೊಂದಿಗೆ ವೆಂಕಟೇಶ್ವರ ಸ್ವಾಮಿ ದರ್ಶನ ಮಾಡಿದ್ದಾರೆ. ಶಾಸಕ ಸತೀಶ್ ರೆಡ್ಡಿ, ಸಚ್ಚಿದಾನಂದ ಸೇರಿದಂತೆ ಹಲವರು ಇದ್ದರು.
‘ರಾಬರ್ಟ್’ ಸಿನಿಮಾ ಬಿಡುಗಡೆಯಾಗುವುದಕ್ಕೂ ಮುನ್ನ ಕೂಡ ದರ್ಶನ್ ತಿರುಪತಿಗೆ ಭೇಟಿ ನೀಡಿದ್ದರು. ಈಗ ದರ್ಶನ್ ಅವರು ಡೆವಿಲ್ ಸಿನಿಮಾ ಆರಂಭಕ್ಕೂ ಮುನ್ನ ತಿರುಪತಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ದರ್ಶನ್ ಅವರ ಹುಟ್ಟು ಹಬ್ಬದ ಡೆವಿಲ್ ‘ಡೆವಿಲ್’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.