ಬೆಂಗಳೂರು: ದೇವರ ದಯೆಯಿಂದ ಎಲ್ಲರೂ ಆರೋಗ್ಯವಾಗಿದ್ದೇವೆ. ಯಾರೂ ಸಹ ಗಾಬರಿ, ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ನಮಗೆ ಕೊರೊನಾ ರೋಗದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೇನ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.
ನಾನು ಕ್ಷೇಮವಾಗಿದ್ದೇನೆ, ಅಗತ್ಯ ಪರೀಕ್ಷೆಗಳೊಂದಿಗೆ ವೈದ್ಯರ ಸಲಹೆ ಸೂಚನೆಗಳನ್ನು ಪಡೆಯುತ್ತಿದ್ದೇನೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನನ್ನ ಜತೆ ಆಗಮಿಸಿದ ಐವರು ಸಿಬ್ಬಂದಿಗೆ ಕೊರೊನಾ ಬಂದಿದೆ. ಹೀಗಾಗಿ ಹೋಂ ಐಸೋಲೇಶನ್ನಲ್ಲಿದ್ದೇನೆ ಎಂದು ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
ಈ ನಡುವೆ, ಕೃಷಿ ಸಚಿವ ಬಿ.ಸಿ ಪಾಟೀಲ್ ಹಾಗೂ ಕುಟುಂಬ ವಗ9ದವರು ಕೊರೊನಾ ಸೋಂಕಿನಿಂದ ಗುಣಮುಖರಾಗಲೆಂದು ಹಾರೈಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಶಕ್ತಿದೇವತೆ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ʻNOCʼ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
ರಾಜ್ಯ ಸರ್ಕಾರವು ನಿರಾಕ್ಷೇಪಣಾ ಪತ್ರ (NOC) ಪಡೆಯುವ ನಿಯಮದಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಅದರಂತೆ ತಿದ್ದುಪಡಿಯ ಪ್ರಮುಖ ಅಂಶಗಳು ಈ ರೀತಿಯಾಗಿದೆ. ಮುಖ್ಯ ಅಂಶಗಳು: 1.ಹಳೆಯ ನಿಯಮ:...