ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು : ಹೆಚ್ಡಿಕೆ

Mahesh M Dhandu by Mahesh M Dhandu
December 29, 2021
in Newsbeat, Politics, ರಾಜಕೀಯ
Former Prime Minister HD Devegowda tests positive for COVID-19 saaksha tv
Share on FacebookShare on TwitterShare on WhatsappShare on Telegram

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು H D Deve Gowda : ಹೆಚ್ಡಿಕೆ

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026
ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್’ನ 5 ವರ್ಷದ ಸರಕಾರವೇ ಇತ್ತು. ʼಸಿದ್ದಹಸ್ತರೇʼ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ.

ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ.

ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ. 23/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.

ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.

ಪಾಪ ತೊಳೆಯುವ ತಾಯಿ ʼಲೋಕಪಾವನಿʼ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣʼದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.

ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Tags: #Saaksha TVH D KUMARASWAMYH.D Deve Gowdakaveri
ShareTweetSendShare
Join us on:

Related Posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram