ಕೇಂದ್ರದಿಂದ ಒಂದು ಪೈಸೆ ಹರಿಹಾರ ಬಂದಿಲ್ಲ : ಕೆಸಿಆರ್
ಹೈದರಾಬಾದ್ : ಮಳೆ ಮತ್ತು ಪ್ರವಾಹಕ್ಕೆ ಬಲಿಯಾದವರ ಪುನರ್ವಸತಿಗಾಗಿ ನಾವು ಕೈಗೊಂಡಿರುವ ಕ್ರಮಗಳಿಗೆ ಕೇಂದ್ರ ಸರ್ಕಾರದಿಂದ ಒಂದು ಪೈಸಾ ಕೂಡ ಪರಿಹಾರ ಬಂದಿಲ್ಲ ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಕೇಂದ್ರ ಪರಿಶೀಲನಾ ತಂಡದ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ ನಾನಾ ಭಾಗಗಳಲ್ಲಿ, ವಿಶೇಷವಾಗಿ ಹೈದರಾಬಾದ್ ನಗರದಲ್ಲಿ ಪ್ರವಾಹ ಉಂಟಾಗಿದೆ.
ಇದು ಹಲವಾರು ಕ್ಷೇತ್ರಗಳಲ್ಲಿ ನಷ್ಟಕ್ಕೆ ಕಾರಣವಾಯಿತು. ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಬೆಳೆ ನಷ್ಟವಾಗಿದೆ.
ಪ್ರಾಥಮಿಕ ಅಂದಾಜಿನ ಪ್ರಕಾರ 5,000 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲೈಂಗಿಕ ಕ್ರಿಯೆಗೆ ಒಪ್ಪದ ಅಪ್ರಾಪ್ತೆಗೆ ಬೆಂಕಿ ಹಚ್ಚಿದ ಕಿಡಿಗೇಡಿ
ಕೇಂದ್ರ ತಂಡವು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರಕ್ಕೆ ವರದಿ ನೀಡಿದ ಮೇಲೆ ಪರಿಹಾರ ಬಿಡುಗಡೆಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರವು ಹುಸಿ ಭರವಸೆಗಳನ್ನು ನೀಡುತ್ತದೆ ಮತ್ತು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮುಂದುವರಿದು ಕೇಂದ್ರದ ವಿರುದ್ಧ ಕಿಡಿಕಾರಿದ ಕೆಸಿಆರ್, ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯಕ್ಕೆ ಭಾರಿ ನಷ್ಟವಾಗಿದ್ದರೂ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಂದು ರೂಪಾಯಿಯನ್ನು ಸಹ ಸಹಾಯವಾಗಿ ಬಿಡುಗಡೆ ಮಾಡಲು ವಿಫಲವಾಗಿದೆ.
ಹೈದರಾಬಾದ್ಗೆ ಭಾರಿ ನಷ್ಟವಾಗಿದೆ, ಇಷ್ಟು ಸಂಕಷ್ಟ ಅನುಭವಿಸಿದರು ನೆರವು ನೀಡದಿರುವುದು ಅತ್ಯಂತ ವಿಷಾದನೀಯ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel