KD Kannada Film : ಪ್ರೇಮ್ – ಧ್ರುವ ಸಿನಿಮಾಗೆ ‘ರಣಧೀರ’ನ ಎಂಟ್ರಿ..!!
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ KD ಸಿನಿಮಾ ಈಗಾಗಲೇ ಸಖತ್ ಹೈಪ್ ಕ್ರಿಯೇಟ್ ಮಾಡಿದೆ.. ಪ್ಯಾನ್ ಇಂಡಿಯನ್ ಲೆವೆಲ್ ನಲ್ಲಿ ರಿಲೀಸ್ ಆಗಲಿರೋ ಈ ಸಿನಿಮಾದಲ್ಲಿ ಇದೀಗ ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸುತ್ತಿದ್ದಾರೆ..
ಹೊಸ ವರ್ಷದ ಸಂದರ್ಭದಲ್ಲಿ ಕೆಡಿ ಸಿನಿಮಾದಲ್ಲಿ ರವಿಚಂದ್ರನ್ ಅವರ ಫಸ್ಟ್ ಲುಕ್ ರಿವೀಲ್ ಆಗಿದೆ.
ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದಾರೆ.
ಎಂದೂ ಕಾಣಿಸಿಕೊಂಡಿರದ ಲುಕ್ ನಲ್ಲಿ ರವಿಚಂದ್ರನ್ ಮಿಂಚಿದ್ದಾರೆ.