ನವದೆಹಲಿ : ರಾಷ್ಟ್ರ ರಾಜಧಾನಿಯ ಸಿಎಂ ಆಗಿ ಮೂರನೇ ಬಾರಿಗೆ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ರಾಮ್‌ಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ದೆಹಲಿ ನಿರ್ಮಾಣಕ್ಕೆ ಕಾರಣವಾದ 50 ಮಂದಿ ಪ್ರಮುಖರ ಜತೆಗೆ ಕೇಜ್ರಿವಾಲ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ದೆಹಲಿಯ ಪ್ರಸಿದ್ಧ ಸಿಗ್ನೇಚರ್ ಬ್ರಿಡ್ಜ್ ನ ವಿನ್ಯಾಸಕಾರರು, ಶಿಕ್ಷಕರು, ಬಸ್ ಮಾರ್ಷಲ್‌ಗಳು, ಅಗ್ನಿಶಾಮಕ ದಳದ ಕಾರ್ಯಾಚರಣೆ ವೇಳೆ ಜೀವ ಕಳೆದುಕೊಂಡವರ ಕುಟುಂಬ ವರ್ಗ ಸೇರಿದಂತೆ ಒಟ್ಟಾರೆ 50 ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಕೇಜ್ರಿವಾಲ್ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರಿಗೆ ಆಹ್ವಾನಿಸಲಾಗಿದೆ.
ನಮ್ಮದು ತ್ಯಾಗ ಮಾಡಿರುವ ಕುಟುಂಬ – ಸುಮಲತಾ
ಮಾಜಿ ಸಂಸದೆ ಸುಮಲತಾ ತಮ್ಮ ರಾಜಕೀಯ ಜೀವನದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ಕುಟುಂಬವು ತ್ಯಾಗ ಮಾಡಿರುವುದಾಗಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸುಮಲತಾ, ಸಚಿವ ಚಲುವರಾಯಸ್ವಾಮಿಯ ಸ್ಥಾನಮಾನಕ್ಕಾಗಿ ಪ್ರತಿಭಟನೆಯಲ್ಲಿ...